2022: ಮ್ಯಾನೇಜರ್ ಸೇರಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ SBIನಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್,ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಡಿ.28):ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ( ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (), ಡೆಪ್ಯುಟಿ ಮ್ಯಾನೇಜರ್( ), ಚೀಫ್​​ ಮ್ಯಾನೇಜರ್ ( ) ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​, , , ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಒಟ್ಟು 15 ಹುದ್ದೆಗಳ ಮಾಹಿತಿ ಇಂತಿದೆ:ಚೀಫ್​​ ಮ್ಯಾನೇಜರ್ -2ಮ್ಯಾನೇಜರ್-6ಡೆಪ್ಯುಟಿ ಮ್ಯಾನೇಜರ್-7 ವಿದ್ಯಾರ್ಹತೆ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, , , ಎಂಬಿಎ ಪೂರ್ಣಗೊಳಿಸಿರಬೇಕು. 2022: ಬೆಂಗಳೂರು ಮೆಡಿಕಲ್​ ಕಾಲೇಜಿನ ಡೈರೆಕ್ಟರ್​ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನ ಅರ್ಜಿ ಶುಲ್ಕ:ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು // ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ವಯೋಮಿತಿ ಮತ್ತು ವೇತನ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,170 ರಿಂದ 89,890 ರೂ ವೇತನ ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟಿಂಗ್​ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ ವಿಶೇಷ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್​ ಆಫ್​ ಇಂಡಿಯಾ:ಬ್ಯಾಂಕ್ ಆಫ್​ ಇಂಡಿಯಾ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ವಿಶೇಷ ಭದ್ರತಾ ಅಧಿಕಾರಿ ( ) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಆನ್​ಲೈನ್()​ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 7, 2022 ಆಗಿದೆ. ಅಭ್ಯರ್ಥಿಗಳು ಬ್ಯಾಂಕ್​ ಆಫ್​ ಇಂಡಿಯಾದ ಅಧಿಕೃತ ವೆಬ್​ ತಾಣ ​ ... ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗೆ ತಿಳಿದುಕೊಳ್ಳಬಹುದು. ವಿದ್ಯಾರ್ಹತೆ ಮತ್ತು ವಯೋಮಿತಿ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಯಾವುದಾದರು ಒಂದು ವಿಷಯದಲ್ಲಿ ಪದವಿ ಪಡೆದಿರಬೇಕು. ಮತ್ತು ಅಭ್ಯರ್ಥಿಗಳ ವಯಸ್ಸು 25-40 ವರ್ಷದೊಳಗಿರಬೇಕು. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ವಿಶೇಷ ಭದ್ರತಾ ಅಧಿಕಾರಿ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮಹಾರಾಷ್ಟ್ರದ ಮುಂಬೈನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ವಿಶೇಷ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.