2022: ಹಾವೇರಿಯ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಹಾವೇರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕನಕಾಪುರ ಗ್ರಾಮ ಪಂಚಾಯಿತಿಯಲ್ಲಿನ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು(ಡಿ.28):ಸಾರ್ವಜನಿಕ ಗ್ರಂಥಾಲಯ ಇಲಾಖೆ ( ) ವತಿಯಿಂದ ಹಾವೇರಿ ( ) ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕನಕಾಪುರ ಗ್ರಾಮ ಪಂಚಾಯಿತಿಯಲ್ಲಿನ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕ ( ) ಕಂ-ಮಾಹಿತಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಹಾವೇರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕನಕಾಪುರ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅರ್ಹತೆಗಳು:ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಈ ಹುದ್ದೆ ಮೀಸಲಾಗಿದೆ. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. 2021: ಬ್ಯಾಂಕಿಗ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ, ಈಗಲೇ ಚೆಕ್ ಮಾಡಿ ವಯೋಮಿತಿ:ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಮಾಹಿಳಾ ಅಭ್ಯರ್ಥಿಯ ವಯಸ್ಸು ಕನಿಷ್ಠ18 ವರ್ಷ ಇರಬೇಕು. ಗರಿಷ್ಟ 33 ವರ್ಷ ವಯೋಮಿತಿ ಇರಬೇಕು. ಆಯ್ಕೆ ಪ್ರಕ್ರಿಯೆ:ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಕೆ:ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕನಕಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜನವರಿ 31,2022ರೊಳಗೆ ಸಲ್ಲಿಸಲು ಕೋರಲಾಗಿದೆ. ಇತರೆ ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಅಥವಾ ದೂರವಾಣಿ ಸಂಖ್ಯೆ 08375-236022 ಗೆ ಕರೆ ಮಾಡಬಹುದು. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಇಂತಿದೆ:ಆಧಾರ್ ಕಾರ್ಡ್ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಜೆರಾಕ್ಸ್‌ ಕಾಪಿಲೈಬ್ರರಿ ಸೈನ್ಸ್‌ ಪದವಿ / ಪಿಜಿ ಡಿಗ್ರಿ ಪ್ರಮಾಣ ಪತ್ರ ಜೆರಾಕ್ಸ್‌ ಕಾಪಿ.ಇತ್ತೀಚಿನ ಭಾವಚಿತ್ರ.ಇತರೆ ಅಗತ್ಯ ದಾಖಲೆಗಳು 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಪಂಚಾಯಿತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ:ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ( ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ://../ ಗೆ ಭೇಟಿ ನೀಡಿ. ಅರ್ಹತೆಗಳು:ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು. ವಯೋಮಿತಿ:ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು. ಕಚೇರಿ ವಿಳಾಸ:ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ. ಅರ್ಜಿ ಸಲ್ಲಿಕೆ:ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 24,2022ರೊಳಗೆ ಸಲ್ಲಿಸಲು ಕೋರಲಾಗಿದೆ.