2022: ಖಾಲಿ ಇರುವ 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಪಶ್ಚಿಮ ಮಧ್ಯ ರೈಲ್ವೆ ಬೆಂಗಳೂರು(ಡಿ.24):ಪಶ್ಚಿಮ ಮಧ್ಯ ರೈಲ್ವೇ ( )ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 21 ಸ್ಪೋರ್ಟ್ಸ್​ ಪರ್ಸನ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ಪೋರ್ಟ್ಸ್​ ಕೋಟಾ, 10ನೇ ತರಗತಿ ಹಾಗೂ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಆನ್​ಲೈನ್​() ಮೂಲಕ ಅರ್ಜಿ ಸಲ್ಲಿಸಲು ಜನವರಿ 22 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಪಶ್ಚಿಮ ಮಧ್ಯ ರೈಲ್ವೆಯ ಅಧಿಕೃತ ವೆಬ್​​ ತಾಣ ​...inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿ:ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ ಟೆಕ್ನಿಕಲ್​ ಹುದ್ದೆಗಳಿಗೆ ಐಟಿಐ ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು. ಅಭ್ಯರ್ಥಿಗಳಿಗೆ 10 ವರ್ಷ, ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಶುಲ್ಕ ವಿವರ:ಸಾಮಾನ್ಯ, ಒಬಿಸಿ- 500 ರೂ. , ಎಸ್​ಸಿ/ಎಸ್​ಟಿ/ಮಾಜಿ ಸೈನಿಕ- 250 ರೂ. ಅರ್ಜಿ ಶುಲ್ಕವಿದ್ದು, ಆನ್​ಲೈನ್​ ಪೇಮೆಂಟ್​​ ಮೂಲಕ ಅರ್ಜಿ ಶುಲ್ಕ ಪಾವತಿಸಲು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆಯ್ಕೆ ಪ್ರಕ್ರಿಯೆ:ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್​​ಲಿಸ್ಟಿಂಗ್​, ಕ್ರೀಡಾ ಸಾಧನೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದವರಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ. ಮತ್ತು ನಿಯಮಾನುಸಾರ ವೇತನ ನೀಡಲಾಗುತ್ತದೆ. 2022: ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ ನರ್ಸಿಂಗ್​ ಸೂಪರಿಂಟೆಂಡೆಂಟ್​ ಸೇರಿ 14 ಹುದ್ದೆಗಳಿಗೆ ಪೂರ್ವ ಕರಾವಳಿ ರೈಲ್ವೆ ಅರ್ಜಿ ಆಹ್ವಾನ:ಪೂರ್ವ ಕರಾವಳಿ ರೈಲ್ವೆ ( )ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫಾರ್ಮಾಸಿಸ್ಟ್​​ (), ಹಾಸ್ಪಿಟಲ್​ ಅಟೆಂಡೆಂಟ್ ( )​​, ಹೌಸ್​ ಕೀಪಿಂಗ್​ ಅಸಿಸ್ಟೆಂಟ್ ( ), ನರ್ಸಿಂಗ್​ ಸೂಪರಿಂಟೆಂಡೆಂಟ್​ ( ) ಹೀಗೆ ಒಟ್ಟು 14 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿ ಕೊನೆ ದಿನ ಡಿಸೆಂಬರ್ 31. ಆಸಕ್ತರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್...inಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 14 ಹುದ್ದೆಗಳು ಖಾಲಿ ಇದ್ದು ಅದರಲ್ಲಿ ನರ್ಸಿಂಗ್​ ಸೂಪರಿಂಟೆಂಡೆಂಟ್- 04, ಫಾರ್ಮಾಸಿಸ್ಟ್- 02, ಹಾಸ್ಪಿಟಲ್​ ಅಟೆಂಡೆಂಟ್​​- 04, ಹೌಸ್​ ಕೀಪಿಂಗ್​ ಅಸಿಸ್ಟೆಂಟ್-04 ಹುದ್ದೆಗಳ ನೇಮಕ ಮಾಡಿಕೊಳ್ಳಲಾಗುತ್ತಿದೆ. 2022: ವಿಶೇಷ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್​ ಆಫ್ ವಿದ್ಯಾರ್ಹತೆ:ನರ್ಸಿಂಗ್​ ಸೂಪರಿಂಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್​ ( ), ಫಾರ್ಮಾಸಿಸ್ಟ್- 12ನೇ ತರಗತಿ (), ಹಾಸ್ಪಿಟಲ್​ ಅಟೆಂಡೆಂಟ್​​- 10 ನೇ ತರಗತಿ ಮತ್ತು ಹೌಸ್​ ಕೀಪಿಂಗ್​ ಅಸಿಸ್ಟೆಂಟ್-10 ನೇ ತರಗತಿ ಪಾಸಾಗಿರಬೇಕು. ವಯೋಮಿತಿ:ನಾಲ್ಕು ವಿಭಾಗಗಳಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಲಾಗಿದ್ದು, ನರ್ಸಿಂಗ್​ ಸೂಪರಿಂಟೆಂಡೆಂಟ್ ಗೆ 20-40 ವರ್ಷ, ಫಾರ್ಮಾಸಿಸ್ಟ್‌ಗೆ 20-35 ವರ್ಷ, ಹಾಸ್ಪಿಟಲ್​ ಅಟೆಂಡೆಂಟ್‌ಗೆ 18-33 ವರ್ಷ, ಹೌಸ್​ ಕೀಪಿಂಗ್​ ಅಸಿಸ್ಟೆಂಟ್‌ಗೆ 18-33 ವರ್ಷ ನಿಗದಿಪಡಿಲಾಗಿದೆ. ಆಯ್ಕೆಯಾದವರು ಒಡಿಶಾದ ಭುವನೇಶ್ವರದಲ್ಲಿ ಉದ್ಯೋಗ ಮಾಡಬೇಕಾಗುತ್ತದೆ.