2022: ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ ಬೆಂಗಳೂರು(ಡಿ.24):ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( -) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಬೆಂಗಳೂರು ಘಟಕದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ಕಾಂಟ್ರ್ಯಾಕ್ಟ್ ಆಧಾರದ ಮೇಲೆ 10 ಪ್ರಾಜೆಕ್ಟ್ ಇಂಜಿನಿಯರ್- ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್-.inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ವಿದ್ಯಾರ್ಹತೆ ಮತ್ತು ವಯೋಮಿತಿ:ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಮೊದಲು ಅರ್ಹತೆಗೆ ಅನುಗುಣವಾಗಿ ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40,000/- ರಿಂದ 55,000/-ರೂಗಳ ವರೆಗೆ ವೇತನ ಇರಲಿದೆ. 2022: ವಿಶೇಷ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್​ ಆಫ್​ ಅರ್ಜಿ ಶುಲ್ಕ ವಿವರ:ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯನ್ನು ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ ಇಂತಿದೆ:ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ://.-./. ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6 ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ಈ ವಿಳಾಸಕ್ಕೆ ಕಳುಹಿಸಿ ಕೊಡಿ.. . () - 560013, .ಅಧಿಸೂಚನೆಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ :://.-./.?=-%20for%20PE--21-12-21. 2022: ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ 2022ರ ಹೈದ್ರಾಬಾದ್ ಬಿಇಎಲ್‌ನಲ್ಲಿ 84 ಹುದ್ದೆಗಳಿಗೆ ನೇಮಕಾತಿ:ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಹೈದರಾಬಾದ್ ಘಟಕದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ಕಾಂಟ್ರ್ಯಾಕ್ಟ್ ಆಧಾರದ ಮೇಲೆ 84 ಟ್ರೈನಿ ಇಂಜಿನಿಯರ್- ಮತ್ತು ಪ್ರಾಜೆಕ್ಟ್ ಇಂಜಿನಿಯರ್- ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್-.inಮೂಲಕ ಅರ್ಜಿ ಸಲ್ಲಿಸಬಹುದು. ಬಿಇಎಲ್ ನೇಮಕಾತಿ ನೋಟಿಫಿಕೇಷನ್ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ://.-./.?=01-%20WEBSITE%20ADVT%20ENGLISH-08-12-2021.