2022: ಕೊಪ್ಪಳದ ಕಿಮ್ಸ್ ನಲ್ಲಿ 17 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ ಬೆಂಗಳೂರು(ಡಿ.19):ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ( ) ಕೊಪ್ಪಳದಲ್ಲಿ () ಖಾಲಿ ಇರುವ ಬೋಧಕರ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ (), ಅಸೋಸಿಯೇಟ್ ಪ್ರೊಫೆಸರ್ ( ) ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ( ) ಒಟ್ಟು 17 ಬೋಧಕ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಲು ಕೋರಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ, ಹೆಚ್ಚಿನ ಮಾಹಿತಿಗೆ ://.../ ಗೆ ಭೇಟಿ ನೀಡಲು ಕೋರಲಾಗಿದೆ. ಪ್ರೊಫೆಸರ್ -4, ಅಸೋಸಿಯೇಟ್ ಪ್ರೊಫೆಸರ್-5 ಮತ್ತು ಮತ್ತು ಅಸಿಸ್ಟೆಂಟ್ ಪ್ರೊಫೆಸರ್ 8 ಹೀಗೆ ಒಟ್ಟು 17 ಹುದ್ದೆಗಳು ಖಾಲಿ ಇದೆ. ಕೊಪ್ಪಳದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ., ಅನ್ನು ಪೂರ್ಣಗೊಳಿಸಿರಬೇಕು. ಅನುಭವ:ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು 3 ವರ್ಷಗಳ ಕಾಲ ಕೆಲಸ ಮಾಡಿದ ಅನುಭವದೊಂದಿಗೆ 4 ಸಂಶೋಧನಾ ಲೇಖನ ಪ್ರಕಟಗೊಂಡಿರಬೇಕು. ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸಲು 4 ವರ್ಷಗಳ ಅನುಭವ ಹೊಂದಿರಬೇಕು. 2 ಸಂಶೋಧನಾ ಲೇಖನ ಪ್ರಕಟಗೊಂಡಿರಬೇಕು. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಮೂರು ವರ್ಷಗಳ ಅನುಭವವಿರಬೇಕು. ಈ ಎಲ್ಲಾ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 45 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು ಆಗಿರಬೇಕು. 2022: ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ ಅರ್ಜಿ ಶುಲ್ಕ ಮತ್ತು ವೇತನ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 2500/- ರೂ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಮಿಕ್ಕಂತೆ ಪ್ರೊಫೆಸರ್ ಹುದ್ದೆಗೆ ತಿಂಗಳಿಗೆ 1,44,200 ರೂ ನಿಂದ 2,18,200/-ರೂ , ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ 1,31,400- ರೂ ನಿಂದ 2,17,100/- ರೂ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 79,800 ರೂ ನಿಂದ 211500/ ರೂ ವರೆಗೂ ವೇತನ ಸಿಗಲಿದೆ. 2022: ನಮ್ಮ ಮೆಟ್ರೋದಲ್ಲಿ 144 ಇಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟ್ ://.../ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗಂಗಾವತಿ ರೋಡ್ ಕಿಡದಾಳ ಹತ್ತಿರ -583231 ವಿಳಾಸಕ್ಕೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ. ಹುಬ್ಬಳ್ಳಿ ಕಿಮ್ಸ್ ನಲ್ಲಿ ಖಾಲಿ ಇರುವ 37 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ:ಕಿಮ್ಸ್ ಹುಬ್ಬಳ್ಳಿಯಲ್ಲಿ ( ) ಖಾಲಿ ಇರುವ ಬೋಧಕರ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ (), ಅಸೋಸಿಯೇಟ್ ಪ್ರೊಫೆಸರ್ ( ) ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ( ) ಒಟ್ಟು 37 ಬೋಧಕ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಲು ಕೋರಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ, ಹೆಚ್ಚಿನ ಮಾಹಿತಿಗೆ ://.../ ಗೆ ಭೇಟಿ ನೀಡಲು ಕೋರಲಾಗಿದೆ. ಅಥವಾ ://./ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಹುಬ್ಬಳ್ಳಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ., ಅನ್ನು ಪೂರ್ಣಗೊಳಿಸಿರಬೇಕು.