2022: ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯಲ್ಲಿ ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ಬೆಂಗಳೂರು(ಡಿ.22):ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆ ( ) ಕೊಲ್ಕತ್ತಾ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 3 ಜೂನಿಯರ್ ರಿಸರ್ಚ್​ ಫೆಲೋ ( ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ () ಮೂಲಕ ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಎಂಎಸ್ಸಿ, ಎಂಟೆಕ್, ಎಂಇ, ಎನ್​​ಇಟಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ... ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ವಿದ್ಯಾರ್ಹತೆ ಮತ್ತು ವಯೋಮಿತಿ:ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಅಂಗೀಕೃತ ಸಂಸ್ಥೆಯಿಂದ ಕಡ್ಡಾಯವಾಗಿ ಎಂಎಸ್ಸಿ, ಎಂಟೆಕ್, ಎಂಇ, ಎನ್​​ಇಟಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000 ವೇತನ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಉದ್ಯೋಗ ನಿರ್ವಹಿಸಬೇಕಾಗುತ್ತದೆ. 2022: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ:ರಾಮನ್​ ಸಂಶೋಧನಾ ಸಂಸ್ಥೆ ( ) ಬೆಂಗಳೂರಿನಲ್ಲಿ ಖಾಲಿ ಇರುವ ಒಂದು ಟೆಕ್ನಿಕಲ್ ಅಸಿಸ್ಟೆಂಟ್( ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಿಇ, ಬಿ.ಟೆಕ್, ಬಿಎಸ್ಸಿ, ಬಿಸಿಎ, ಡಿಪ್ಲೋಮಾ ಪದವಿ ಪೂರ್ಣಗೊಳಿಸಿರುವ ಒಂದು ವರ್ಷಗಳ ಅನುಭವ ಹೊಂದಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂರ್ಸತೆಯ ಅಧಿಕೃತ ವೆಬ್​​ಸೈಟ್ ... ಗೆ ಭೇಟಿ ನೀಡಿ. ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿಯ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ಮತ್ತು ಮಾಸಿಕ ವೇತನ 23,500 ರೂ ಇರಲಿದೆ. ದಾಖಲಾತಿ ಪರಿಶೀಲನೆ ಮಗತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. : ಸ್ವ ಉದ್ಯೋಗ ಉಚಿತ ತರಬೇತಿಗೆ ರುಡ್‌ಸೆಟ್‌ ಅರ್ಜಿ ದಾವಣಗೆರೆ ಜಿಲ್ಲೆಯಲ್ಲಿರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:ದಾವಣಗೆರೆ ಜಿಲ್ಲೆ ( )ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ( ) ಕಾರ್ಯ ನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ ( )ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 120 ಅಂಗನವಾಡಿ ಕಾರ್ಯಕರ್ತೆ ( ) ಮತ್ತು ಅಂಗನವಾಡಿ ಸಹಾಯಕಿ ( ) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ () ಮೂಲಕ ಮಾತ್ರವೇ ಜನವರಿ 18 ರವರೆಗೆ ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ ... ಗೆ ಭೇಟಿ ನೀಡಿ.ವಯೋಮಿತಿ ಮತ್ತು ಆಯ್ಕೆ ವಿಧಾನ: ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯ ಆಯ್ಕೆ ನಡೆಯಲಿದೆ.