2021: ಎಲ್‌ಐಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಹರು ಅರ್ಜಿ ಸಲ್ಲಿಸಿ ಬೆಂಗಳೂರು(ಡಿ.13):ಭಾರತೀಯ ಜೀವ ವಿಮಾ ನಿಗಮವು 2021ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 24 ,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ://./ ಅನ್ನು ಭೇಟಿ ಮಾಡಿ ಹೆಚ್ಚಿ ನ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ. ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಪದವಿ ಜೊತೆಗೆ ಸಿಎ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. LICಯಲ್ಲಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ:ಭಾರತೀಯ ಜೀವ ವಿಮಾ ನಿಗಮದಲ್ಲಿ ಸೆಕ್ರೆಟರಿ ಹುದ್ದೆಗೆ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಡಿಸೆಂಬರ್ 23ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಯ್ಕೆಯಾದ ಅಭ್ಯಥಿಗಳಿಗೆ ವರ್ಷಕ್ಕೆ 8 ಲಕ್ಷದಿಂದ 10 ಲಕ್ಷದವರೆಗೆ ವೇತನ ನಿಗದಿಯಾಗಿದೆ. ಸೀನಿಯರ್ ಲೆವೆಲ್ ಹುದ್ದೆಗೆ 35 ರಿಂದ 45 ವರ್ಷ ವಯೋಮಿತಿ ಹಾಗೂ ಜೂನಿಯರ್ ಲೆವೆಲ್ ಗೆ 30 ರಿಂದ 40 ವರ್ಷಗಳ ವಯೋಮಿತಿ ಒಳಗಿನವರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಸೀನಿಯರ್ ಲೆವೆಲ್ ಹುದ್ದೆಗೆ 4 ರಿಂದ 10 ವರ್ಷಗಳ ಅನುಭವ ಮತ್ತು ಜೂನಿಯರ್ ಲೆವೆಲ್ ಗೆ 1 ವರ್ಷಗಳ ಕೆಲಸದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಪ.ಬಂಗಾಳದ ಅಂಚೆ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:ಪಶ್ಚಿಮ ಬಂಗಾಳ ಪೋಸ್ಟಲ್ ಸರ್ಕಲ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 124 ಪೋಸ್ಟ್ಮ್ಯಾನ್, ಪೋಸ್ಟಲ್, ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, , ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ://../ ಭೇಟಿ ನೀಡಬಹುದು. ಪೋಸ್ಟ್​​ಮ್ಯಾನ್​- 48, ಪೋಸ್ಟಲ್ ಅಸಿಸ್ಟೆಂಟ್-51-, ಸಾರ್ಟಿಂಗ್ ಅಸಿಸ್ಟೆಂಟ್ -25 ಹೀಗೆ 120 ಕ್ಕೂ ಹೆಚ್ಚು ವಿವಿಧ ಫೋಸ್ಟ್ಗಳು ಖಾಲಿ ಇದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಪಾಸಾಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ:ಅಸಿಸ್ಟೆಂಟ್ ಡೈರೆಕ್ಟರ್ ಆಫ್​ ಪೋಸ್ಟಲ್ ಸರ್ವೀಸಸ್ಆಫೀಸ್ ಆಫ್​ ದಿ ಚೀಫ್​ ಪೋಸ್ಟ್​ಮಾಸ್ಟರ್ ಜನರಲ್ಪಶ್ಚಿಮ ಬಂಗಾಳ ಸರ್ಕಲ್ಪಿ-36, ಸಿ ಆರ್​ ಅವೆನ್ಯೂಯೋಗಾಯೋಗ್​ ಭವನ್​ಕೊಲ್ಕತ್ತಾ-700012