ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ- ಸೆಟ್) ಹೊಸ ದಿನಾಂಕ ನಿಗದಿ * ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ* ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ* ಪ್ರಕಟಣೆ ಹೊರಡಿಸಿದ ಮೈಸೂರು ವಿಶ್ವವಿದ್ಯಾಲಯ ಬೆಂಗಳೂರು, (ಜುಲೈ.09):ಕೊರೋನಾ ಕಾರಣದಿಂದ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ. ಜುಲೈ 25ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಗೆ() ಡೇಟ್‌ ಫಿಕ್ಸ್‌..! ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್​ಡೌನ್​ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು : ://.-../