ಉದ್ಯೋಗಾಕ್ಷಿಂಗಳಿಗೆ ಗುಡ್‌ನ್ಯೂಸ್: 5846 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಪೊಲೀಸ್ ವಿಭಾಗದಲ್ಲಿ ಖಾಲಿ ಇರುವ 5846 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. ನವದೆಹಲಿ, (ಸೆ.01): ಸಿಬ್ಬಂದಿ ನೇಮಕಾತಿ ಆಯೋಗವು 5846 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 7,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ವಿದ್ಯಾರ್ಹತೆ:12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 4499 ಹುದ್ದೆಗೆ ಅರ್ಜಿ ಆಹ್ವಾನ: ಪಾಸಾದವರಿಗೆ ಇದು ಸುವರ್ಣವಕಾಶ ವಯೋಮಿತಿ:ಜುಲೈ 1,2020ಕ್ಕೆ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ವೇತನದ ವಿವರ:ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ. ತಿಂಗಳಿಗೆ . ರಾಷ್ಟ್ರೀಯ ನೇಮಕಾತಿ ಏಜೆನ್ಸಿಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ ಆಯ್ಕೆ ಪ್ರಕ್ರಿಯೆ:ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಬೆರಳಚ್ಚು ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ:ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2020ರೊಳಗೆ ಪಾವತಿಸಬೇಕಿರುತ್ತದೆ. ಮಹಿಳೆ, ಮಾಜಿ ಸೈನಿಕ, ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಎಸ್‌ಎಸ್‌ಸಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲುಇಲ್ಲಿ ಕ್ಲಿಕ್ಮಾಡಿ.