4499 ಹುದ್ದೆಗೆ ಅರ್ಜಿ ಆಹ್ವಾನ: ಪಾಸಾದವರಿಗೆ ಇದು ಸುವರ್ಣವಕಾಶ ಈಶಾನ್ಯ ಗಡಿನಾಡು ರೈಲ್ವೆ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಹತ್ತನೇ ತರಗತಿ ಪಾಸ್ ಆಗಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಇದು ಸುವರ್ಣವಕಾಶ ನವದೆಹಲಿ (ಆ.30):ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆ ಅನ್ವಯ ಅಗತ್ಯ 4499 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈಶಾನ್ಯ ಗಡಿನಾಡು ರೈಲ್ವೆಯ ಒಟ್ಟು 7 ಘಟಕಗಳು ಮತ್ತು ವರ್ಕ್‌ಶಾಪ್‌ಗಳಲ್ಲಿ 4499 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಸೆಪ್ಟೆಂಬರ್ 15 ,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಿರುದ್ಯೋಗಿಗಳಿಗೆ ಗುಡ್ ಆಫರ್: 3348 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿದ್ಯಾರ್ಹತೆ:ಅಭ್ಯರ್ಥಿಗಳು ಕಡ್ಡಾಯವಾಗಿ 10 ತರಗತಿಯಲ್ಲಿ ಶೇಕಡಾ 50 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರ ಪಡೆದಿರಬೇಕು. ಅರ್ಜಿ ಶುಲ್ಕ:ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿ ನೀಡಲಾಗಿದ್ದು, ಇನ್ನುಳಿದಂತೆ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕ 100 ರೂಪಾಯಿ ನಿಗದಿಪಡಿಸಲಾಗಿದೆ. ಇನ್ನು ಈ ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ ಎಸ್‌ಬಿಐ ಚಲನ್ ಮೂಲಕ ಪಾವತಿಸಬಹುದು. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಯೋಮಿತಿ:ಅಭ್ಯರ್ಥಿಗಳ ವಯಸ್ಸು ಕನಿಷ್ಠ 15 ಮತ್ತು ಗರಿಷ್ಠ 24 ವರ್ಷಗಳು ಆಗಿರಬೇಕು. ಕಾಯ್ದಿರಿಸಿದ ತರಗತಿಗಳಿಗೆ ಮೀಸಲಾತಿ ವರ್ಗಕ್ಕೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ವಿಶ್ರಾಂತಿ ಇರುತ್ತದೆ. ಆದ್ರೆ, ವಯಸ್ಸನ್ನ 1 ಜನವರಿ 2020 ರವರೆಗೆ ಲೆಕ್ಕಹಾಕಲಾಗುತ್ತದೆ. ಆಯ್ಕೆ ಪ್ರಕ್ರಿಯೆ:ಈ ಹುದ್ದೆಗಳಿಗೆ ನೇಮಕಾತಿಗಾಗಿ ಯಾವುದೇ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. 10 ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಹುದ್ದೆಗಳನ್ನು ಹಂಚಲಾಗುತ್ತದೆ. ಆಸಕ್ತರು .... ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.