ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ. ಬೆಂಗಳೂರು, (ಜೂನ್.27): ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ವಾರದಲ್ಲಿ 5 ದಿನ ಮಾತ್ರ ಕೆಲಸ ಮಾಡಬಹುದು. ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಭಾಗ್ಯ ಸಿಗಲಿದೆ. ವಾರದಲ್ಲಿ 1 ದಿನ ಮದ್ಯ ಸಿಗಲ್ಲ, ಆ ಒನ್ ಡೇ ಕುಡುಕರು ಶಾಂತತೆಯಿಂದ ಇರ್ಬೇಕು..! ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಗುತ್ತಿರುವುದರಿಂದ ಜುಲೈ 5ರಿಂದ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಅಲ್ಲದೇ ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ನೀಡಿದ್ದು, ಇದರಿಂದ ನೌಕರರಿಗೆ ರಿಲೀಫ್ ಸಿಕ್ಕಂತಾಗಿದೆ.