4014 ಸಿವಿಲ್‌, ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕ; ಅರ್ಜಿ ಸಲ್ಲಿಕೆ ಆರಂಭ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಮತ್ತು ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಅರ್ಜಿಸಲ್ಲಿಕೆ ಆರಂಭವಾಗಿದೆ. ಬೆಂಗಳೂರು, (ಮೇ, 20):ಕರ್ನಾಟಕ ಪೊಲೀಸ್ ಇಲಾಖೆ ಖಾಲಿ ಇರುವ 4104 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಇಂದಿನಿಂದ (20-05-2020) ರಿಂದ 22-06-2020ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. ಕರ್ನಾಟಕ ಪೊಲೀಸ್ ಇಲಾಖೆಯ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ; ಆಸಕ್ತರಿಗೆ ಸುವರ್ಣವಕಾಶ! ಹುದ್ದೆಗಳ ವಿವರ* ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್(-)-2007* ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್() - 558* ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (-) - 1005* ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ () - 444 ಪೊಲೀಸ್ ಕಾನ್ಸ್‌ಟೇಬಲ್(ನಾಗರಿಕ) ಹುದ್ದೆಗಳಿಗೆ ವಯೋಮಿತಿ:ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌) ಹುದ್ದೆಗಳಿಗೆ ವಯೋಮಿತಿ:ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕ:ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 250 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ ://cpcnhk20.-./ ಗೆ ಭೇಟಿ ನೀಡಿ.