ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ವಿವಿಧ ಕಾರಣಗಳಿಂದ ಖಾಲಿ ಆಗಿರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಜ.26):ಚಿತ್ರದುರ್ಗ ಜಿಲ್ಲಾ ಕಂದಾಯ ವಿಭಾಗದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಿಗರ () ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 21/2/2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ಯಾವುದೇ ಪರೀಕ್ಷೆ ಇಲ್ಲದೇ ನೇರ ನೇಮಕಾತಿ ನಡೆಯಲಿದೆ. ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ ವಿದ್ಯಾರ್ಹತೆ:ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಇ/ಐಸಿಎಸ್‌ಇ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ವಯೋಮಿತಿ:21/2/2020ಕ್ಕೆ ಅನ್ವಯವಾಗುಂತೆ ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, 2A/2B/3A/3B ಅಭ್ಯರ್ಥಿಗಳಿಗೆ 38 ವರ್ಷ ಹಾಗೂ / ಮತ್ತು ಪ್ರವರ್ಗ1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ವೇತನ ಶ್ರೇಣಿ:21,400 ರಿಂದ 42,000 ರೂ. ತಿಂಗಳಿಗೆ ಅರ್ಜಿ ಶುಲ್ಕ: ಸಾಮಾನ್ಯ/ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 200 ರೂ. / ಹಾಗೂ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಇಂಡಿಯಾ ಶಾಖೆಯಲ್ಲಿ ಆನ್‌ಲೈನ್‌ ಮೂಲಕ ಜಮಾ ಮಾಡತಕ್ಕದ್ದು. ಆಯ್ಕೆ ಪ್ರಕ್ರಿಯೆ: ದ್ವಿತೀಯ ಪಿಯುಸಿ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ಮಾಡಿ.