ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ: ಅರ್ಜಿ ಹಾಕಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. ಬೆಂಗಳೂರು, (ಜ.07):ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ 11 ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 23,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ವಿದ್ಯಾರ್ಹತೆ:ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ,ಸ್ನಾತಕೋತ್ತರ ಪದವಿ,ಎಂ.ಫಿಲ್ ಮತ್ತು ಪಿ.ಎಚ್‌ಡಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು. ಉದ್ಯೋಗದ ಸುವರ್ಣ ಅವಕಾಶ: 8000 ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ ಶ್ರೇಣಿ:ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,200 ರಿಂದ 2,18,200 ರೂ ವೇತನವನ್ನು ನಿಗದಿಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಳಿಗೆ 3000 ರೂ. ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 1,500 ರೂ. ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್/ಬ್ಯಾಂಕ್ ಚೆಕ್/ ಪೋಸ್ಟಲ್ ಆರ್ಡರ್ ಮೂಲಕ ಜನವರಿ 23,2020ರೊಳಗೆ ಪಾವತಿಸಬೇಕಿರುತ್ತದೆ. ವಿವಿಧ ಹುದ್ದೆಗೆ ನೇಮಕಾತಿ: ಅರ್ಜಿ ಹಾಕಿ ಅರ್ಜಿ ಸಲ್ಲಿಕೆ ಹೇಗೆ?:ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ,ರಾಯಚೂರಿನ ಅಧಿಕೃತ ವೆಬ್‌ಸೈಟ್‌ ://.../.// ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 23,2020ರೊಳಗೆ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದು. ಕಚೇರಿಯ ವಿಳಾಸ: ರಿಜಿಸ್ಟ್ರಾರ್ ಕಚೇರಿ, ಲಿಂಗಸುಗೂರು-ಮಾನ್ವಿ ರಸ್ತೆ, ಕೃಷಿ ವಿಶ್ವವಿದ್ಯಾಲಯ, ರಾಯಚೂರು-584104.