6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ಕೊನೆ ದಿನಾಂಕ ಸೇರಿದಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಜ.01):ಅಸ್ಸಾಂ ಪೊಲೀಸ್ ಇಲಾಖೆ 6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 06-01-2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ () ವ್ಯಾಸಂಗ ಮಾಡಿರಬೇಕು. ಅಥವಾ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 2nd ತೇರ್ಗಡೆಯಾಗಿರಬೇಕು. ವಯೋಮಿತಿ:18 ರಿಂದ 25 ವಯೋಮಿತಿ ಇರುವ ಅಭ್ಯರ್ಥಿಗಳು ಕಾನ್ಸ್ ಟೇಬಲ್ ಹುದ್ದೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದೇಹದಾರ್ಡ್ಯತೆ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆಗಳ ಪರಿಶೀಲನೆಯೊಂದಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಶುಲ್ಕ:ಯಾವುದೇ ಅರ್ಜಿ ಶುಲ್ಕವಿಲ್ಲದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ಮಾಡಿ