ಕರ್ನಾಟಕ: ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕರ್ನಾಟಕ ಸರ್ವೆ ಸಟ್ಲ್ ಮೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್() 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಡಿ.26): ಕರ್ನಾಟಕದಲ್ಲಿ ಖಾಲಿ ಇರುವ 2072 ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಜನವರಿ 21ರೊಳಗೆ ಸಲ್ಲಿಸಲು ಕೋರಲಾಗಿದೆ. ಕರ್ನಾಟಕ ಹಾಲು ಒಕ್ಕೂಟದಲ್ಲಿ ನೇಮಕಾತಿ: ಅರ್ಜಿ ಹಾಕಿ ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಪಿಯುಸಿ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪಡೆದಿರಬೇಕು. ವಯೋಮಿತಿ:ಕನಿಷ್ಠ 18 ವರ್ಷ. ಗರಿಷ್ಠ 65 ವಯಸ್ಸುಅರ್ಜಿ ಶುಲ್ಕ:500 ರೂ.ನೇಮಕಾತಿ ಪ್ರಕ್ರಿಯೆ:ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ ಮಾಡಿ.