ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಜ.01):ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ವಿವಿಧ ಒಟ್ಟು 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಜ್ಯೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಸೇರಿದಂತೆ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 28/1/2020 ಕೊನೆ ದಿನವಾಗಿದೆ. ಕರ್ನಾಟಕ: ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ () ವ್ಯಾಸಂಗ ಮಾಡಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಶುಲ್ಕ: ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಇತರ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ಮಾಡಿ