ನಬಾರ್ಡ್ ನೇಮಕಾತಿ: ಮುಗಿಸಿದವರೂ ಅರ್ಜಿ ಹಾಕಬಹುದು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಡಿ.29):73 ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ (ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ) ನಬಾರ್ಡ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2020ರ ಜನವರಿ 12ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ ()ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ: ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿದ್ಯಾರ್ಹತೆ:10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ:ಡಿಸೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000 ರೂ. ವೇತನ ನಿಗದಿಪಡಿಸಲಾಗಿದೆ. ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ನೇಮಕಾತಿ ಪ್ರಕ್ರಿಯೆ:ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ಮಾಡಿ