1104 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ: ಪಾಸಾದವರೂ ಅರ್ಜಿ ಹಾಕ್ಬಹುದು ಈಶಾನ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್‌ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅಗತ್ಯ ಅರ್ಹತೆಗಳ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ನ.27):ಭಾರತೀಯ ರೈಲ್ವೆಯ ಈಶಾನ್ಯ ವಲಯದಲ್ಲಿ ಖಾಲಿ ಇರುವ 1104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25, 2019ರೊಳಗೆ ಅರ್ಜಿ ಸಲ್ಲಿಸಬಹುದು. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಹತೆ:ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಇನ್ನು ಐಟಿಐ ಸಂಬಂಧಪಟ್ಟ ಟ್ರೇಡ್ ನಲ್ಲಿ ಪ್ರಮಾಣ ಪತ್ರ ಹೊಂದರಬೇಕು. ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 15 ರಿಂದ 24 ವರ್ಷ ಹಾಗೂ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ವಿನಾಯಿತಿ ಇದೆ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶಗಳುನೇಮಕಾತಿ ಪ್ರಕ್ರಿಯೆ:ಕ್ರೀಡಾ, ಶೈಕ್ಷಣಿಕ ಅರ್ಹತೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ. ಎಸ್ ಸಿ/ ಎಸ್ಟಿ, ಮಹಿಳೆ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. : 26-11-2019Last : 25-12-2019 ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿಕ್ಲಿಕ್ ಮಾಡಿ.