SSCಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್‌ಎಸ್‌ಎಲ್‌) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಡಿ.06):ಕೆಳ ದರ್ಜೆಯ ಗುಮಾಸ್ತ/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 10,2020 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ * ಹುದ್ದೆಗಳ ವಿವರ:ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಗೆ 19,900 ರಿಂದ 63,200ರೂ ತಿಂಗಳಿಗೆ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. * ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ (-4) ಹುದ್ದೆಗಳಿಗೆ 25,500-81,100 ರು. ಸಂಬಳ ತಿಂಗಳಿಗೆ.* ಡಾಟಾ ಎಂಟ್ರಿ ಆಪರೇಟರ್ ಗ್ರೇಡ್- 25,500-81,100 ರೂ. ವೇತನ ಶ್ರೇಣಿ ನಿಗದಿಪಡಿಸಲಾಗಿದೆ. * ವಿದ್ಯಾರ್ಹತೆ:ದ್ವಿತೀಯ ಪಿಯುಸಿ ವಯೋಮಿತಿ:ನೇಮಕಾತಿ ನಿಯಮಾನುಸಾರ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅರ್ಜಿ ಸಲ್ಲಿಕೆ:ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪರೀಕ್ಷಾ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರು. ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಮೂಲಕ ಪಾವತಿಸಬಹುದು. ಆಯ್ಕೆ ವಿಧಾನ:ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ತಿಳಿಯಲು ಇಲ್ಲಿಕ್ಲಿಕ್ ಮಾಡಿ