ಅಂಚೆ ಇಲಾಖೆಯಲ್ಲಿ ನೇಮಕಾತಿ: 2707 ಹುದ್ದೆಗಳಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಅಂಚೆ ಇಲಾಖೆಯಿಂದ ಭರ್ಜರಿ ಸಿಹಿ ಸುದ್ದಿ ನೀಡಿದ್ದು, 2707 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಹೈದರಾಬಾದ್,(ಅ.22):ಆಂಧ್ರಪ್ರದೇಶಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಇರುವ ಒಟ್ಟು 2707ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೈಋತ್ಯ ರೈಲ್ವೆಯಲ್ಲಿ ನೇಮಕಾತಿ: ಅರ್ಜಿ ಹಾಕಿ, ಯಾವುದೇ ಅರ್ಜಿ ಶುಲ್ಕವಿಲ್ಲ ಗ್ರಾಮೀಣ ಡಾಕ್ ಸೇವಕ ( ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ನವೆಂಬರ್ 14, 2019ರೊಳಗೆ ಸಲ್ಲಿಸಲು ಕೋರಲಾಗಿದೆ. ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾಗಿರಬೇಕು.ವಯೋಮಿತಿ:15-10-2019ಕ್ಕೆ ಅನ್ವಯವಾಗುಂತೆ ಅಭ್ಯರ್ಥಿಗೆ 18 ರಿಂದ 40 ವರ್ಷ ವಯಸ್ಸಾಗಿರಬೇಕು. ಅರ್ಜಿ ಶುಲ್ಕ: ಸಮಾನ್ಯ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನನ್ಉ ನಿಗದಿಪಡಿಸಲಾಗಿದ್ದು, / ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರ ಮೇಲೆ ಆಯ್ಕೆ ಪ್ರಕ್ರಿಯೆ ಇರಲಿಲದೆ. ಪ್ರಮುಖ ದಿನಾಂಕ* ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 14-11-2019* ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-11-2019 ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲುಕ್ಲಿಕ್ ಮಾಡಿ. ಅಕ್ಟೋಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: