ನೈಋತ್ಯ ರೈಲ್ವೆಯಲ್ಲಿ ನೇಮಕಾತಿ: ಅರ್ಜಿ ಹಾಕಿ, ಯಾವುದೇ ಅರ್ಜಿ ಶುಲ್ಕವಿಲ್ಲ ಭಾರತೀಯ ರೈಲ್ವೆಯ ನೈಋತ್ಯ ವಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಯ ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಅ.22): ಭಾರತೀಯ ರೈಲ್ವೆಯ ನೈಋತ್ಯ ವಲಯದಲ್ಲಿ 386 ಹಿರಿಯ ಕ್ಲರ್ಕ್ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪೊಲೀಸ್ ನೇಮಕಾತಿ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ ಹಿರಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 20, 2019ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ (), ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:18 ರಿಂದ 42 ವರ್ಷ ವಯಸ್ಸು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷ, ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 18 ರಿಂದ 47 ವರ್ಷ ನಿಗದಿಪಡಿಸಲಾಗಿದೆ. ನೇಮಕಾತಿ ಪ್ರಕ್ರಿಯೆ:ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಶುಲ್ಕ:ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆಯಾವುದೇ ಶುಲ್ಕವಿಲ್ಲ. ಹಾಗಾಗಿ ಉಚಿತವಾಗಿ ಅರ್ಜಿ ಹಾಕಬಹುದು. ಪ್ರಮುಖ ದಿನಾಂಕ*ಅರ್ಜಿ ಸಲ್ಲಿಸಲು ಆರಂಭ ದಿನ:23.10.2019*ಅರ್ಜಿ ಸಲ್ಲಿಸಲು ಕೊನೆ ದಿನಾಂಕ :ನವೆಂಬರ್ 20, 2019ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲುಕ್ಲಿಕ್ ಮಾಡಿ