2700 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮುಗಿಸಿದವರು ಅರ್ಜಿ ಹಾಕ್ಬಹುದು 2700 ನಾವಿಕ ಹುದ್ದೆ ನೇಮಕಾತಿಗೆ ಭಾರತೀಯ ನೌಕಾಪಡೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ. ಬೆಂಗಳೂರು, (ನ.05):ಭಾರತೀಯ ನೌಕಾಪಡೆಯು 2700 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 18,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಹತೆ:10+2/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ:ಆಗಸ್ಟ್ 1,2000 ರಿಂದ ಜುಲೈ 31,2003ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೇತನ ಶ್ರೇಣಿ:ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ರಿಂದ 69,100 ರೂ ವೇತನ ನಿಗದಿಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 215 ರೂ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿಕ್ಲಿಕ್ ಮಾಡಿ