8400 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ಹಾಕಿ ದೇಶದ ವಿವಿಧ ನಗರಗಳಲ್ಲಿ ಖಾಲಿ ಇರುವ 8400 ಹುದ್ದೆಗಳನ್ನು ಭರ್ತಿ ಮಾಡಲು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಬೇಕಾದ ಅರ್ಹತೆಗಳು ಏನು ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಜೂ.19):8400 ಹುದ್ದೆಗಳನ್ನು ಭರ್ತಿ ಮಾಡಲು ಇನ್ಸ್‌ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌(ಐಬಿಪಿಎಸ್‌) ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 4/7/2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕರ್ನಾಟಕ ಪೋಸ್ಟಲ್ ಸರ್ಕಲ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ ವಿದ್ಯಾರ್ಹತೆ:: ಯಾವುದೇ ಪದವಿ, ಎಂಬಿಎ, ಸಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆ ವಿಧಾನ:ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಶುಲ್ಕ:ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರು. ಇತರೆ ವರ್ಗದ ಅಭ್ಯರ್ಥಿಗಳಿಗೆ 600 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ವಯೋಮಿತಿ:ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿಕ್ಲಿಕ್ ಮಾಡಿ