2024: ಬಿಎಂಟಿಸಿಯಲ್ಲಿ ಖಾಲಿ ಇರುವ 2500 ಕಂಡಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ ಬಿಎಂಟಿಸಿ ಖಾಲಿ ಇರುವ‌ 2500 ನಿರ್ವಾಹಕ ಹುದ್ದೆಗಳು ಹಾಗೂ ಜಿಟಿಟಿಸಿಯಲ್ಲಿ ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು (ಏ.6):ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಖಾಲಿ ಇರುವ‌ 2500 ನಿರ್ವಾಹಕ ಹುದ್ದೆಗಳು ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಲಿಂಕನ್ನು ಏ.19ರಂದು ಬಿಡುಗಡೆ‌ ಮಾಡಲಾಗುವುದು. ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ಅರ್ಹರು ಈ ಅವಧಿಯಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ ಕೆಇಎ ವೆಬ್‌ಸೈಟ್‌ ://... ವೀಕ್ಷಿಸಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಉದ್ಯೋಗಾವಕಾಶ ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಹುದ್ದೆ ಹೆಸರು : ನಿರ್ವಾಹಕ (ಕಂಡಕ್ಟರ್ )ಹುದ್ದೆಗಳ ಸಂಖ್ಯೆ : 2500. ಅರ್ಹತೆಗಳು:ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್. ಅಥವಾ 3 ವರ್ಷಗಳ ಡಿಪ್ಲೊಮ ಪಾಸ್‌ ಆಗಿರಬೇಕು. ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿಯನ್ನು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ ಮಾಡಿರುವವರು ಅರ್ಜಿ ಹಾಕಲು ಅರ್ಹರಲ್ಲ. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರತಕ್ಕದ್ದು.ಪುರುಷರ ಎತ್ತರ 160 , ಮಹಿಳೆಯರ ಎತ್ತರ 150 ಇರಬೇಕು. ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜಿಸಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ ರೂ.9,100 ನೀಡಲಾಗುತ್ತದೆ. ಆಯ್ಕೆಯಾದವರಿಗೆ ರೂ.18660-25300 ವೇತನ ಶ್ರೇಣಿ ಇರಲಿದೆ. ಕರ್ನಾಟಕ ಲೆಕ್ಕ ಪರಿಶೋಧನೆ, ಲೆಕ್ಕ ಪತ್ರ ಇಲಾಖೆಯಲ್ಲಿ ನೇಮಕಾತಿ, 1 ಲಕ್ಷದವರೆಗೆ ವೇತನ ವಯೋಮಿತಿ:ಅರ್ಜಿ ಸಲ್ಲಿಸಲು ಇಚ್ಚಿಸುವವರ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯಸ್ಸಾಗಿರಬೇಕು.ಸಾಮಾನ್ಯ ವರ್ಗ - 35 ವರ್ಷಗಳು.2A / 2B / 3A / 3B ಅಭ್ಯರ್ಥಿಗಳಿಗೆ 38 ವರ್ಷಗಳು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷಗಳು. ಅಪ್ಲಿಕೇಶನ್‌ ಶುಲ್ಕ ವಿವರ ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಅರ್ಜಿ ಶುಲ್ಕ ರೂ.750.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.