ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ ಕೆಪಿಎಸ್‌ಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ‌ಹೈ-ಕ‌ ವೃಂದದ‌ಲ್ಲಿನ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ‌ಹೈ-ಕ‌ ವೃಂದದ‌ಲ್ಲಿನ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರಿಂದ ಆನ್‌ಲೈನ್ ಮೂಲಕ ಅರ್ಜಿ ://.../ ಸಲ್ಲಿಸಬಹುದು. ಹುದ್ದೆಯ ವಿವರಪಂಚಾಯತ್ ಅಭಿವೃದ್ಧಿ ಅಧಿಕಾರಿ : 247 ಹುದ್ದೆ 1. ಉಳಿಕೆ ಮೂಲ ವೃಂದ : 150 ಹುದ್ದೆ2. ಹೈದರಾಬಾದ್-ರ‍್ನಾಟಕ ವೃಂದ : 97 ಹುದ್ದೆ ಪ್ರಮುಖ ದಿನಾಂಕಗಳುಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15-04-2024ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024 ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 600 ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರೂ. 300 ಮಾಜಿ ಸೈನಿಕರಿಗೆ: ರೂ.50 ಎಸ್ ಸಿ/ ಎಸ್ ಟಿ/ ಪ್ರವರ್ಗ -1, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ ವಯಸ್ಸಿನ ಮಿತಿ (15-05-2024 ರಂತೆ) :ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳುಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳುವೇತನ ಶ್ರೇಣಿ: ಮಾಸಿಕ ರೂ. 37900 - 70850 ಶೈಕ್ಷಣಿಕ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಆಯ್ಕೆ ವಿಧಾನ: ಈ ಮೇಲ್ಕಂಡ ಹುದ್ದೆಗಳನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳ‌ನ್ವಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಸ್ಮರ್ಧಾತ್ಮಕ ಪರೀಕ್ಷೆಯ ಮಾಹಿತಿ: ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ಧಿಷ್ಟ ಪತ್ರಿಕೆಯ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆಯ ಮಾದರಿಯಲ್ಲಿ ಇದ್ದು, ಎರಡು ಗಂಟೆಯ ಅವಧಿಯಲ್ಲಿ ನಡೆಸಲಾಗುತ್ತದೆ. ತಪ್ಪು ಉತ್ತರಕ್ಕೆ ನಾಲ್ಲನೇ ಒಂದು ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ : ://.../