1072 ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಬೇಕಾದ ಅರ್ಹತೆಗಳು ಈ ಕೆಳಗಿನಂತಿವೆ. ಬೆಂಗಳೂರು, [ಏ.22]:ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌) 1072 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆನ್ ಲೈನ್ ನಲ್ಲಿ 14.05.2019ರಿಂದ ಅರ್ಜಿ ಆರಂಭವಾಗಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 16.06.2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ :ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ನಿಯಮ ಉಲ್ಲಂಘನೆ,ಮಾರಾಟ ಕುಸಿತ - ವಾಹನ ಕ್ಷೇತ್ರದಲ್ಲಿ 37,000 ಉದ್ಯೋಗ ಕಡಿತ! ವಯೋಮಿತಿ:ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವೇತನದ ವಿವರ:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500ರಿಂದ 81,100 ರು. ವೇತನವನ್ನು ನಿಗದಿಪಡಿಸಲಾಗಿದೆ.. ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ:100 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ತಿಳಿಯಲು ಇಲ್ಲಿಕ್ಲಿಕ್ ಮಾಡಿ.ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ.