ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಹಾಕಿ ಖಾಲಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕೋಪಯೋಗಿ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಈ ಕೆಳಗಿನಿಂತಿವೆ. ಬೆಂಗಳೂರು, (ಮಾ.17) :ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 870 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್ ಇಂಜಿನಿಯರ್, ಜ್ಯುನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು 10/4/2019ರೊಳಗೆ ಅರ್ಜಿಗಳನ್ನು ಸಲ್ಲಿಸಹುದು. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್ ವಿದ್ಯಾರ್ಹತೆ:ಪದವಿ, ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು. ವೇತನ ಶ್ರೇಣಿ: ಮೇಲೆ ತಿಳಿಸಲಾಗಿರುವ ಹುದ್ದೆಗಳಿಗೆ ಸೆಲೆಕ್ಟ್ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 33450 ರಿಂದ 83,900 ರೂ. ವೇತನ ನಿಗದಿ ಮಾಡಲಾಗಿದೆ. ಆಯ್ಕೆ ವಿಧಾನ:ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿಕ್ಲಿಕ್ ಮಾಡಿ.