ಹೈಕೋರ್ಟ್ ಆದೇಶದ ಬಳಿಕ ಗೈರಾದವರಿಗೆ ಮರುಪರೀಕ್ಷೆ ಇಲ್ಲ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿನಿಯರಿಗೆ ಕೆಲವು ಷರತ್ತುಗಳೊಂದಿಗೆ ಮರು ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಅನುವು ಮಾಡಿಕೊಡಲು ತೀರ್ಮಾನಿಸಿದೆ. ಬೆಂಗಳೂರು(ಮಾ.18):ಹಿಜಾಬ್ ವಿವಾದ ( ) ಹಿನ್ನೆಲೆಯಲ್ಲಿ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿನಿಯರಿಗೆ ಕೆಲವು ಷರತ್ತುಗಳೊಂದಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲು ರಾಜ್ಯ ಸರ್ಕಾರ ( ) ನಿರ್ಧರಿಸಿದೆ. ಹಿಜಾಬ್ () ಧರಿಸಲು ಅನುಮತಿಸಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಬಂದರೆ ಮತ್ತೊಮ್ಮೆ ಪರೀಕ್ಷೆ () ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಗುರುವಾರ ಬಿಜೆಪಿ ಶಾಸಕ ರಘುಪತಿ ಭಟ್ ( ) ಅವರು ಸದನದಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು (.. ), ಹೈಕೋರ್ಟ್ ಅಂತಿಮ ಆದೇಶ ಬರುವ ಮೊದಲು ಹಿಜಾಬ್'ಗೆ ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾದವರಿಗೆ ಮತ್ತೊಂದು ಅವಕಾಶ ನೀಡಲು ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು. ಆದರೆ, ಹೈಕೋರ್ಟ್ ( ) ಅಂತಿಮ ಆದೇಶದ ಬಳಿಕವೂ ಪರೀಕ್ಷೆ ಬಹಿಷ್ಕರಿಸಿ ಹೊರ ಹೋದವರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. : 10ನೇ ತರಗತಿ ಪರೀಕ್ಷೆ ಬರೆದಿದ್ದಕ್ಕೆ ಅಪ್ರಾಪ್ತ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ! ಹಿಜಾಬ್ ವಿವಾದ ಕುರಿತು ಹೈಕೋರ್ಟ್‌ನ ಆದೇಶದ ವಿರುದ್ಧ ಅಸಮಾಧಾನಗೊಂಡು ಬಂದ್"ಗೆ ಕರೆ ನೀಡಲಾಗಿತ್ತು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೆಲವರಿಗೆ ತೀರ್ಪಿನ ಬಗ್ಗೆ ಅಸಮಾಧಾನವಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕಿದೆ, ಬಂದ್‌ ಕರೆ 'ನ್ಯಾಯಾಂಗ ನಿಂದನೆ'ಯಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಪ್ರತಿಯೊಬ್ಬರೂ ನ್ಯಾಯಾಲಯದ ಆದೇಶ ಪಾಲಿಸಬೇಕು. "ಆದರೆ ಕೆಲವರು ತೀರ್ಪಿನಿಂದ ಅತೃಪ್ತರಾಗಿದ್ದರೆ, ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಅವರಿಗಿದೆ ಎಂದು ಹೇಳಿದರು. ಶಿಕ್ಷಣ, ಧರ್ಮ ಎರಡು ಕಣ್ಣುಗಳಿದ್ದಂತೆ: ಮಂಡ್ಯದ ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ತಂದೆ ಹೇಳಿಕೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಠೆ ಮಾಡಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೆ ಚಾಮರಾಜನಗರದ ಖಾಸಗಿ ಕಾಲೇಜಿನ ಸುಮಾರು 10 ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು. ತರಗತಿಗಳಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ ನೀಡಿರುವ ತೀರ್ಪನ್ನು ಖಂಡಿಸಿ ನಗರದ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದರು. ಹಿಜಾಬ್‌ ಧರಿಸಲು ಅವಕಾಶ ನೀಡದಿದ್ದರೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವುದಿಲ್ಲ ಎಂದು ಅವರು ಹೇಳಿದರು. ಹೈಕೋರ್ಟ್‌ ತೀರ್ಪು ನೀಡಿದೆ ನ್ಯಾಯ ನೀಡಿಲ್ಲ, ಹಿಜಾಬ್‌ ನನ್ನ ಹೆಮ್ಮೆ, ನನ್ನ ಆಯ್ಕೆ, ನನ್ನ ಸ್ವಾತಂತ್ರ್ಯ ನಮ್ಮ ಹಕ್ಕು ನಮಗೆ ವಾಪಸ್‌ ಬೇಕು’ ಸೇರಿದಂತೆ ವಿವಿಧ ಘೋಷಣೆಗಳನ್ನು ಬರೆದಿದ್ದ ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟಿಸಿದರು. ಹೈಕೋರ್ಟ್‌ನ ತೀರ್ಪಿನಿಂದ ನಿರಾಸೆಯಾಗಿದೆ. ಇದನ್ನು ನಾವು ಒಪ್ಪುವುದಿಲ್ಲ. ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ’ ಎಂದರು. ನಮ್ಮ ಸಾಂವಿಧಾನಿಕ ಹಕ್ಕುಗ‌ಳಿಗಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಆದರೆ, ಹಿಜಾಬ್‌ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿರುವುದು ಬೇಸರ ಉಂಟು ಮಾಡಿದೆ‘ ಎಂದರು. ಪೂರ್ವಸಿದ್ಧತಾ ಪರೀಕ್ಷೆಗೂ ಮೊದಲಿನಿಂದ ನಾವು ತರಗತಿಗೆ ಹೋಗುತ್ತಿಲ್ಲ. ಹಿಜಾಬ್‌ ಹಾಕಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಬರೆಯಲು ಅವಕಾಶ ಕೊಟ್ಟಿದ್ದರು. ಹಾಗಾಗಿ, ಪರೀಕ್ಷೆ ಬರೆದಿದ್ದೇವೆ. ವಾರ್ಷಿಕ ಪರೀಕ್ಷೆಯಲ್ಲಿ ಏನಾಗುತ್ತದೆಯೋ ಗೊತ್ತಿಲ್ಲ. ಒಂದು ವೇಳೆ ಹಿಜಾಬ್‌ಗೆ ಅವಕಾಶ ನೀಡದಿದ್ದರೆ ನಾವು ಪರೀಕ್ಷೆ ಬರೆಯುವುದಿಲ್ಲ’ ಎಂದು ವಿದ್ಯಾರ್ಥಿನಿಯರು ಹೇಳಿದರು. ಸರ್ಕಾರದ ನಿರ್ದೇಶನಗಳನ್ನು ಪ್ರತಿಯೊಬ್ಬರು ಪಾಲಿಸಬೇಕಾಗುತ್ತಿದೆ, ಕಾಲೇಜಿಗೆ ದಶಕಗಳಿಂದಲೂ ಸಮವಸ್ತ್ರ ಸಂಹಿತೆಯಿದೆ, ಹೀಗಾಗಿ ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು ಎಂದು ಕಾಲೇಜು ಪ್ರಾಂಶುಪಾಲ ಆರ್ ಎಂ ಸ್ವಾಮಿ ಹೇಳಿದ್ದಾರೆ.