ವಿ.ವಿ.ಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ * ವಿಶ್ವವಿದ್ಯಾಲಯಗಳಲ್ಲಿ ಇ-ಆಫೀಸ್ ಕಡ್ಡಾಯ* ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ*ಭೌತಿಕ ರೂಪದಲ್ಲಿ ಪತ್ರ, ಕಡತ, ಪ್ರಸ್ತಾವನೆ ಬಂದರೆ ವಾಪಸ್ ಬೆಂಗಳೂರು, (ಫೆ.25):ಕರ್ನಾಟಕದ () ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು () ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ( ) ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ( ) ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, `ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ ಕೆಲ ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ’ ಎಂದು ಎಚ್ಚರಿಸಿದ್ದಾರೆ. ಕಲೆ, ವಾಸ್ತುಶಿಲ್ಪ, ಮಹಾಕಾವ್ಯ, ವೇದಗಳ ! ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿ.ವಿ.ಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದಾಗಿ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲೋದ್ದೇಶವೇ ವಿಫಲವಾದಂತಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಎನ್ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ. ಬದಲಾಯ್ತು ಶಾಲೆ ಬೇಸಿಗೆ ರಜೆಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ( ) ಬೇಸಿಗೆ ರಜೆಯನ್ನು ಶಿಕ್ಷಣ ಇಲಾಖೆ ಕೆಲ ಬದಲಾವಣೆ ಮಾಡಿದೆ. ಏಪ್ರಿಲ್ 9ಕ್ಕೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಎಪ್ರಿಲ್ 10ರಿಂದ ಮೇ.15ರವರೆಗೆ ಬೇಸಿಗೆ ರಜೆ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮುಂದಿನ ಅಂದ್ರೆ 2022-23 ಶೈಕ್ಷಣಿಕ ವರ್ಷ ಮೇ.16ರಿಂದ ಆರಂಭವಾಗಲಿದೆ. ಈ ಹಿಂದೆ ಶಾಲಾ ಶೈಕ್ಷಣಿಕ ವರ್ಷವು ಮೇ.29ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಬೇಗವೇ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ.16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಕೋವಿಡ್ ಕಾರಣದಿಂದ ನಿರಂತರವಾಗಿ ಭೌತಿಕ ತರಗತಿಗಳು ನಡೆಯದೆ, ಆನ್ ಲೈನ್ ಶಿಕ್ಷಣ ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹೀಗಾಗಿ ಈ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು 'ಕಲಿಕಾ ಚೇತರಿಕಾ ಕಾರ್ಯಕ್ರಮ"ವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ ಕೋವಿಡ್ ಕಾರಣ 2019-20, 2020-21 ಹಾಗೂ 2021-22 ಈ ಮೂರು ಶೈಕ್ಷಣಿಕ ಸಾಲಿನಲ್ಲಿ ಭೌತಿಕ ತಗತಿಗಳು ನಡೆಯದೆ ವಿದ್ಯಾರ್ಥಿಗಳಿಗೆ ಆಗಿರುವ ಕಲಿಕಾ ಕೊರತೆಯನ್ನು ನಿವಾರಿಸಲು ಮುಂದಿನ ವರ್ಷ ಶೈಕ್ಷಣಿಕ ವರ್ಷದಲ್ಲಿ ಸೇತುಬಂಧ ಕಾರ್ಯಕ್ರಮ ಆಯೋಜಿಸಲು ಕೂಡ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕಾರ್ಯಕ್ರಮ ಮೇ16ರಿಂದ ಆರಂಭವಾಗಿಲಿದೆ.