ಹಿಜಾಬ್ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸ ಮಾಡಬೇಕಿದೆ, ಸಿಎಂಗೆ ಪತ್ರ ಬರೆದ ಸುರೇಶ್ ಕುಮಾರ್‌ ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವ ಅಗತ್ಯವಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು(ಫೆ.18):ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ( ) ಹೇಳಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( ) ಹಾಗೂ ಶಿಕ್ಷಣ‌ ಮಂತ್ರಿಗಳಾದ ಶ್ರೀ ಬಿ ಸಿ. ನಾಗೇಶ್ ( ) ಅವರುಗಳಿಗೆ ಸುದೀರ್ಘ ಪತ್ರ ಬರೆದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ‌ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ‌ () ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ. ಶಿಕ್ಷಣ ಇಲಾಖೆ ( ) ಹೊಸ ನಾಯಕತ್ವದೊಂದಿಗೆ ಕೆಲಸ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರದ ಬಗ್ಗೆ ಹೆಮ್ಮೆ ಪಡಬೇಕು. ಭವಿಷ್ಯದಲ್ಲಿ ನಮ್ಮ ವಿದ್ಯಾರ್ಥಿಗಳು ಬೆಳೆಯಬೇಕಾದರೆ ಶಿಕ್ಷಣ ಇಲಾಖೆಯ ಕಾರ್ಯವು ಮಹತ್ವದ್ದಾಗಿರಬೇಕು ಎಂದು ಶಾಸಕ ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನ್ಯಾಯಾಲಯವು ಸಾಂವಿಧಾನಿಕ ಅವಕಾಶಗಳನ್ನು ನೋಡುತ್ತಿದೆ. ಆದರೆ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಶಿಕ್ಷಕನಾಗಿ, ಜನಪ್ರತಿನಿಧಿಯಾಗಿ ಹಿಜಾಬ್ ವಿವಾದದ ಬಗ್ಗೆ ದತ್ತಾ ನೇರ ಮಾತು ಮಾಜಿ ಶಿಕ್ಷಣ ಸಚಿವ ಸುರೇಶ್‍ ಕುಮಾರ್‌ ಅವರ ಅಭಿಪ್ರಾಯಗಳು ಕೆಳಕಂಡಂತಿವೆ. ಹಿಜಾಬ್ ವಿವಾದ, ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆಯಿಂದ ಮಹತ್ವದ ಸುತ್ತೋಲೆ