2nd : ಗಮನಿಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಬೆಂಗಳೂರು(ಫೆ.13):ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ (2nd ) ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ( ) ಪರಿಷ್ಕರಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಪರೀಕ್ಷೆ ಎಂದಿನಂತೆ ಏ.16ರಿಂದ ಮೇ.6ರವರೆಗೆ ನಡೆಯಲಿದೆ. ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌://.../ನಲ್ಲಿ ಚೆಕ್‌ ಮಾಡಬಹುದು. ಇದರ ಪ್ರಕಾರವಾಗಿ ಏ.21ರಂದು ಉರ್ದು ಪರೀಕ್ಷೆ ಎಂದಿಂತೆ ನಡೆಯಲಿದ್ದು, ಈ ಮೊದಲು ರಜೆ ಅವಧಿಯಾಗಿದ್ದ ಏ.29ಕ್ಕೆ ಅರೆಬಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. 2022: ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ ಹೊಸ ವೇಳಾಪಟ್ಟಿ ವಿವರ ಇಂತಿದೆ... ಈ ಬಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯೇ ( ) ಸಿದ್ಧಪಡಿಸಿ ನೀಡಿದ್ದ ಮಧ್ಯವಾರ್ಪಿಕ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದಲೇ ಆರೋಪಗಳು ಕೇಳಿಬರುತ್ತಿವೆ. ಲೆಕ್ಕಶಾಸ್ತ್ರ, ಇಂಗ್ಲಿಷ್‌ () , ಗಣಿತ, ರಸಾಯನಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಪ್ರಶ್ನೆ ಪತ್ರಿಕೆಗಳಲ್ಲಿ ಈ ರೀತಿಯ ಹಲವು ಲೋಪಗಳು ಕಂಡು ಬಂದಿದ್ದವು. : ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ, ವಿದೇಶಗಳಿಗೆ ಭಾರತದ ಖಡಕ್ ಎಚ್ಚರಿಕೆ ಮುಂದಿನ ವಾರದಿಂದ ಪದವಿ ತರಗತಿಗಳು ಪ್ರಾರಂಭ:ಕರ್ನಾಟಕದಲ್ಲಿ ಫೆ.14ರಿಂಧ ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಿಯು ಮತ್ತು ಪದವಿ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು. ಬಹುತೇಕ ಮುಂದಿನ ವಾರದಿಂದ ಪದವಿ ತರಗತಿಗಳು ಆರಂಭವಾಗಲಿವೆ ಎಂದು ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( ) ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಗೊಂದಲ ಸೃಷ್ಟಿಸಲು ಹಲವು ಯತ್ನಗಳು ನಡೆಯುತ್ತಿದೆ. ಕೊವಿಡ್ ಲಸಿಕೆ ಬಗ್ಗೆಯೂ ಗೊಂದಲ ಸೃಷ್ಟಿ ಮಾಡಿದ್ದರು. ಮಕ್ಕಳಲ್ಲಿ ನನ್ನ ದೇಶ ಎಂಬ ಮನೋಭಾವನೆ ಬೆಳೆಯಬೇಕು. ಡಿ.28ರವರೆಗೆ ವಿದ್ಯಾರ್ಥಿನಿಯರು ಸಮವಸ್ತ್ರದಲ್ಲಿ ಬರುತ್ತಿದ್ದರು. ಬಳಿಕ ಸಮವಸ್ತ್ರದ ಜತೆ ಹಿಜಾಬ್ ಧರಿಸಿ ಬರುವುದಾಗಿ ಹಟ ಮಾಡಿದರು. ವಿದ್ಯಾರ್ಥಿನಿಯರು ಈ ರೀತಿ ಯಾಕೆ ವರ್ತಿಸಿದರೆಂದು ಗೊತ್ತಿಲ್ಲ. ಒಂದು ಶಾಲೆಯ 6 ವಿದ್ಯಾರ್ಥಿಗಳ ಸಮಸ್ಯೆಯನ್ನು ಈಗ ಅಂತಾರಾಷ್ಟ್ರೀಯ ಸಮಸ್ಯೆ ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.