ಸೆ. 6ರಿಂದ 6-8ನೇ ತರಗತಿಗಳು ಆರಂಭ: ವೇಳಾಪಟ್ಟಿ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ * 6 ರಿಂದ 8 ನೇ ತರಗತಿವರೆಗೆ ಶಾಲೆ ಆರಂಭ ಹಿನ್ನೆಲೆ* ಮಾರ್ಗಸೂಚಿ ಬಿಡುಗಡೆ ‌ಮಾಡಿದ ಶಿಕ್ಷಣ ಇಲಾಖೆ* ಸೆಪ್ಟೆಂಬರ್ 6 ರಿಂದ ಎರಡನೇ ಹಂತದ ಶಾಲೆ ಪ್ರಾರಂಭ ಬೆಂಗಳೂರು, (ಆ.31):ರಾಜ್ಯದಲ್ಲಿ 6-8ನೇ ತರಗತಿಯನ್ನ ಸೆಪ್ಟೆಂಬರ್ 6 ರಿಂದ ಪುನಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಇಂದು (ಆ.31) ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ. 6ರಿಂದ 8ನೇ ತರಗತಿಗಳನ್ನೂ ಪ್ರಾರಂಭಿಸಲು ಸಿಕ್ತು ಸರ್ಕಾರ ಗ್ರೀನ್ ಸಿಗ್ನಲ್: ಎಂದಿನಿಂದ? ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇಕಡಾ 20 ಗಿಂ ಕಡಿಮೆ ಇರುವ ತಾಲೂಕು, ವಲಯಗಳಲ್ಲಿ (ಕೇರಳ ರಾಜ್ಯದೊಡನೆ ಗಡಿ ಹಂಚಿಕೊಂಡಿರುವ ತಾಲೂಕುಗಳನ್ನ ಹೊರತುಪಡಿಸಿ) 9 ಮತ್ತು 10ನೇ ತರಗತಿಗಳ ಜೊತೆಗೆ 6 ರಿಂದ 8ನೇ ತರಗತಿಗಳನ್ನ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ಮಾರ್ಗಸೂಚಿ * ಪಾಸಿಟಿವಿಟಿ ಶೇ.2 ಕ್ಕಿಂತ ಕಡಿಮೆ ಇರುವ ತಾಲೂಕು ವಲಯಗಳಲ್ಲಿ ಶಾಲೆ ಆರಂಭ* ಈಗಾಗಲೇ ಬಿಡುಗಡೆ ಮಾಡಲಾಗಿರುವ ಪಾಲಿಸುವುದು* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು* ಕುಡಿಯುವ ‌ನೀರು ಹಾಗೂ ಆಹಾರ ಮನೆಯಿಂದಲೇ ತರಬೇಕು* ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ* ಆನ್ ಲೈನ್ ತರಗತಿಗೂ ಅವಕಾಶ* ಕೇರಳ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲ್ಲೂಕು ಹಾಗೂ ವಲಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಶಾಲೆ ಪ್ರಾರಂಭ ಮಾಡಬೇಕು * 6 ರಿಂದ 8 ನೇ ತರಗತಿ ನಿರ್ವಹಣೆ ವೇಳಾಪಟ್ಟಿ* ಪಾಳಿ ಪದ್ಧತಿಯಲ್ಲಿ ಮಕ್ಕಳಿಗೆ ‌ಪಾಠ* ಸೋಮವಾರ ದಿಂದ ಶುಕ್ರವಾರದವರೆಗೆ ಮಾತ್ರ ತರಗತಿ ನಡೆಸಬೇಕು*8ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ತರಗತಿ ನಡೆಸುವುದು, ಮಧ್ಯಾಹ್ನ 2 ಗಂಟೆಯಿಂದ 4:30 ರ ತರಗತಿ ನಡೆಸುವುದು* ಬೆಳಿಗ್ಗೆ 10: 30 ರಿಂದ ಮಧ್ಯಾಹ್ನ 1:30 ರವರೆಗೆ* 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು