ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ * ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್* ಪರೀಕ್ಷೆ ಬರೆಯುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ* ಈ ಬಗ್ಗೆ ಸುತ್ತೋಲೆ ಹೊರಡಿಸಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬೆಂಗಳೂರು, (ಜುಲೈ.13):ಕೊರೋನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಅವಕಾಶ ನೀಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್ ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ. ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೋನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಸುತ್ತೋಲೆಯಲ್ಲಿ ತಿಳಿಸಿದೆ.