ಕರ್ನಾಟಕದಲ್ಲಿ ತರಗತಿಗಳು ಪ್ರಾರಂಭ:; ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ ಕರ್ನಾಟಕದಲ್ಲಿ ಇದೀಗ ಹೊಸ ತಳಿ ವೈರಸ್ ಆತಂಕ ಮನೆ ಮಾಡಿದೆ. ಆದರೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ತರಗತಿ ಪ್ರಾರಂಭಿಸಲು ಮುಂದಾಗಿದೆ. ಬೆಂಗಳೂರು, (ಡಿ.26):ರೂಪಾಂತರಗೊಂಡ ವೈರಸ್ ಭೀತಿ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮೊದಲೇ ಹೇಳಿದಂತೆ ಜನವರಿ 1 ರಿಂದ ದ್ವಿತೀಯ ಪಿಯುಸಿ ತರಗತಿಗಳು ಶುರುವಾಗಲಿವೆ. ಹೀಗಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ. ಬ್ರಿಟನ್ ವೈರಸ್ ಮಧ್ಯೆ ಕರ್ನಾಟಕದಲ್ಲಿ ಶಾಲೆ ಆರಂಭವಾಗುತ್ತಾ..? ಸರ್ಕಾರದ ನಡೆ ಏನು? ಮಾರ್ಗಸೂಚಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಇರಲ್ಲ ದಿನಪೂರ್ತಿ ತರಗತಿ45 ನಿಮಿಷಗಳ, 4 ತರಗತಿಗಳನ್ನು ಮಾತ್ರ ಪ್ರತಿದಿನ ನಡೆಸಬೇಕುವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಇಲ್ಲಒಂದು ಕೊಠಡಿಯಲ್ಲಿ ಕೇವಲ 15 ವಿದ್ಯಾರ್ಥಿಗಳಿಗೆ ಮಾತ್ರ ಪಾಠಕೋವಿಡ್ ಹಿನ್ನೆಲೆ ಸಿಬ್ಬದಿಗೆ ಬಯೋಮೆಟ್ರಿಕ್ ಹಾಜರಾತಿ ಇಲ್ಲಕಾಲೇಜುಗಳಲ್ಲಿ ಸಾಮೂಹಿಕ ಪ್ರಾರ್ಥನೆ , ಕ್ರೀಡೆ ನಿಷೇಧ51 ವರ್ಷ ಮೇಲ್ಪಟ್ಟ ಸಿಬ್ಬಂದಿ ಮಾಸ್ಕ್ ಜೊತೆಗೆ ಫೇಸ್ ಶೀಲ್ಡ್ ಬಳಕೆ ಕಡ್ಡಾಯ