ಎಸ್​ಎಸ್​ಎಲ್​ಸಿ ರಿಸಲ್ಟ್ ಪ್ರಕಟ: ಶೇ.71.80 ಫಲಿತಾಂಶ, 6 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್ ಬಹುನಿರೀಕ್ಷಿತ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿವರಗಳನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಅಧಿಕಾರಿಗಳು ನೀಡುತ್ತಿದ್ದಾರೆ. ಬೆಂಗಳೂರು, (ಆ.10):2019-20ನೇ ಸಾಲಿನ ಎಸ್​ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇಖಡವಾರು 71.80 ಫಲಿತಾಂಶ ಬಂದಿದೆ. ಕಳೆದ ವರ್ಷ ಶೇ. 73.70 ಫಲಿತಾಂಶ ಬಂದಿತ್ತು. ಕೊರೋನಾ ಆತಂಕದ ನಡುವೆಯೂ ಪರೀಕ್ಷೆಗೆ ಹಾಜರಾಗಿದ್ದ 8,11,050 ವಿದ್ಯಾರ್ಥಿಗಳ ಪೈಕಿ 5,82, 360 ಮಂದಿ ಉತ್ತೀರ್ಣರಾಗಿದ್ದಾರೆ. 2,28,734 ವಿದ್ಯಾರ್ಥಿಗಳು ಅನುತ್ತೀಣರಾಗಿದ್ದಾರೆ. ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ನಿಮ್ಮ ರಿಸಲ್ಟ್ ನೋಡಿ ಶೇ. 66.41 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ರೆ, ಶೇ. 77.74 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದಬಾರಿ ಇಬ್ಬರು ಮಾತ್ರ 625ಕ್ಕೆ 625 ಅಂಕ ಪಡೆದಿದ್ದರು. ಆದ್ರೆ, ಈ ಬಾರಿ 625ಕ್ಕೆ 625 ಅಂಕ ಪಡೆದ 6 ಮಕ್ಕಳು ರಾಜ್ಯಕ್ಕೆ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಟಾಪರ್​ಗಳು..* ಚಿರಾಯು. ನಾಗಸಂದ್ರ* ನಿಖಿಲೇಶ್ ಮರಳಿ. ಸದಾಶಿವನಗರ* ಧೀರಜ್ ರೆಡ್ಡಿ ಮಂಡ್ಯ.* ಕುಮಾರಸ್ವಾಮಿ, ಸುಳ್ಯ.* ತನ್ಮಯಿ, ಚಿಕ್ಕಮಗಳೂರು* ಸನ್ನಿಧಿ ಮಹಾಬಲೇಶ್ವರ ಹೆಗಡೆ, ಶಿರಸಿ, ಉತ್ತರ ಕನ್ನಡ ಜಿಲ್ಲೆ."