ಆ.10 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್‌ ಮೌಲ್ಯಮಾಪನ, ತಾಂತ್ರಿಕ ಕೆಲಸಗಳು ಪೂರ್ಣ| ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಮೂಲಕ ಫಲಿತಾಂಶ| ಪರೀಕ್ಷೆಗೆ 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು| ಈ ಪೈಕಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು| ಬೆಂಗಳೂರು(ಆ.07):ಕಳೆದ ಜೂನ್‌ 25ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ(ಆ.10) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರು ಹೇಳಿದ್ದಾರೆ. " ಸಾಮಾಜಿಕ ಜಾತಲಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಕೂಡ ಸುಸೂತ್ರವಾಗಿ ಮುಗಿದಿದೆ. ತಾಂತ್ರಿಕ ಕೆಲಸಗಳು ಕೂಡ ಮುಗಿದಿವೆ. ಹೀಗಾಗಿ ಆ.10 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಫಲಿತಾಂಶ: ಆನ್‌ಲೈನ್‌ನಲ್ಲಿ ನೋಡುವುದು ಹೇಗೆ? ಪಿಯು ಫಲಿತಾಂಶವನ್ನ ವಿದ್ಯಾರ್ಥಿಗಳ ಮೊಬೈಲ್ ಗೆ ಕಳುಹಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಕೂಡ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಮೂಲಕ ಫಲಿತಾಂಶ ಸಿಗಲಿದೆ. ಪರೀಕ್ಷೆಗೆ 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೊರೋನಾ ಸೋಂಕು ನಡುವೆಯೂ ಸವಾಲಾಗಿ ಸ್ವೀಕರಿಸಿ ರಾಜ್ಯ ಸರ್ಕಾರ ದೇಶದಲ್ಲಿಯೇ ಮಾದರಿಯಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಶ್ರಮ ವಹಿಸಿ ಕ್ರಮ ಕೈಗೊಂಡಿದ್ದರು.