ಅಂಗೈಯಲ್ಲಿ ಆಕಾಶ: 28 ಶಾಲೆಗಳಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ! 28 ಶಾಲೆಗಳಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ|ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸಿದ ಖಾಸಗಿ ಮತ್ತು ಸರ್ಕಾರಿ ಶಾಲೆಗಳು| ಇತಿಹಾಸ ಬರೆದ ರಾಷ್ಟ್ರ ರಾಜಧಾನಿ ನವದೆಹಲಿಯ ಶಾಲೆಗಳು| ಖಾಸಗಿ ಸಂಸ್ಥೆ ನಿರಂತರ ಪ್ರಯತ್ನದ ಫಲ| ನವದೆಹಲಿ(ಜು.13):ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ, ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಸೇರಿದಂತೆ ಒಟ್ಟು 28 ಶಾಲೆಗಳಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಖಾಸಗಿ ಸಂಸ್ಥೆ , ದೆಹಲಿಯ 25 ಸರ್ಕಾರಿ ಹಾಗೂ 3 ಖಾಸಗಿ ಶಾಲೆಗಳಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದೊಂದು ಕ್ರಾಂತಿಕಾರಕ ನಡೆ ಎಂದು ಹೇಳಿರುವ ಸಂಸ್ಥೆ, ತೃತೀಯ ಲಿಂಗಿ ಎಂಬ ಏಕೈಕ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗುತ್ತಿದ್ದ ಮಕ್ಕಳು ಇದೀಗ ಯಾವುದೇ ಸಂಕೋಚವಿಲ್ಲದೇ ಶಿಕ್ಷಣ ಪಡೆಯಬಹುದು ಎಂದು ಸಂತಸ ವ್ಯಕ್ತಪಡಿಸಿದೆ.