ಮೇಲ್ಜಾತಿ ಬಡವರಿಗೂ ಉದ್ಯೋಗದಲ್ಲಿ ಮೀಸಲಾತಿ, ಮೋದಿ ಘೋಷಣೆ..! ಲೋಕಸಭಾ ಚುನಾವಣೆಗೂ ಮುನ್ನವೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇಲ್ಜಾತಿಯ ಬಡವರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಏನದು ಇಲ್ಲಿದೆ ಡಿಟೇಲ್ಸ್. ನವದೆಹಲಿ, (ಜ.7):2019ರ ಲೋಕಸಭಾ ಚುನಾವಣೆಗೂ ಮುನ್ನವೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಬಡವರಿಗೆ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಮೇಲ್ವರ್ಗದಲ್ಲಿರುವ ಆರ್ಥಿಕವಾಗಿ ಹಿಂದುಳಿದವರಿಗೂ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಜನವರಿ 8 - 9 ರಂದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..? ಸೋಮವಾರ ನವದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ನಾಳೆ ಅಂದರೆ ಮಂಗಳವಾರ ಸಂಸತ್ ನಲ್ಲಿ ಈ ಐತಿಹಾಸಿಕ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಲಿದೆ. ಈ ಮಸೂದೇ ಜಾರಿಗೆ ಬಂದರೆ ಉನ್ನತ ವರ್ಗಗಳಾದ ಜಾಟ್, ಗುಜ್ಜಾರ್, ರಜಪೂತ್, ಬನಿಯಾ, ಬ್ರಾಹ್ಮಣ ಸಮುದಾಯಕ್ಕೆ ಅನುಕೂಲವಾಗಲಿದೆ. ಬಂದ್‌ನಿಂದ ರಾಜ್ಯಕ್ಕಾದ ನಷ್ಟವೆಷ್ಟು ಗೊತ್ತಾ? ಈ ಮೀಸಲಾತಿಗೆ ಇರುವ ಕೆಲ ಷರತ್ತುಗಳು* ಶೇ.10ರಷ್ಟು ಮೀಸಲಾತಿ ಪಡೆಯಬೇಕಿದ್ದರೆ ಅವರ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕೆಳಗಿರಬೇಕು.* 5 ಎಕರೆ ಭೂಮಿ, 1000 ಚದುರ ಅಡಿಗಿಂತ ಕಡಿಮೆ ವಿಸ್ತೀರ್ಣ ಮನೆ ಹೊಂದಿರಬೇಕು.