ಗೆಳೆಯರೇ ಎಕ್ಸಾಂ ಡೇಟ್ ಫಿಕ್ಸ್: ಓದಿನತ್ತ ಇರಲಿ ಗಮನ! ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ| ವೇಳಾಪಟ್ಟಿ ಪ್ರಕಟಿಸಿದ ಪ್ರೌಢ ಶಿಕ್ಷಣ ಮಂಡಳಿ| 2018-19ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ| ಮಾರ್ಚ್ 21, 2019ರಿಂದ ಪರೀಕ್ಷೆಗಳು ಆರಂಭ ಬೆಂಗಳೂರು(ಡಿ.13):ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಪ್ರೌಢ ಶಿಕ್ಷಣ ಮಂಡಳಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರೌಢ ಶಿಕ್ಷಣ ಮಂಡಳಿ ಇಂದು 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 21, 2019ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ.