2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ! ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ. ಬೆಂಗಳೂರು (ಜ.17):ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಉಳಿದಂತೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ. ವಿಷಯವಾರು ವೇಳಾಪಟ್ಟಿಯ ವಿವರ ಇಲ್ಲಿದೆ ನೋಡಿ. ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ 11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ 13-03-2024 ರಂದು ಇಂಗ್ಲಿಷ್ ಪರೀಕ್ಷೆ 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ 22-03-2024 ರಂದು ಹಿಂದಿ ಪರೀಕ್ಷೆ ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ 25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್- 27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ 30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ 03-04-2024 ಅರ್ಥಶಾಸ್ತ್ರ ಪರೀಕ್ಷೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ