1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ, ಶಾಲೆಗಳಲ್ಲಿ ಸೇತುಬಂಧ ಶಾಲೆಗಳಲ್ಲಿ ಸೇತುಬಂಧ ಕಾರ್ಯಕ್ರಮ ನಡೆಸಲು ಸೂಚನೆ. 1-3 ತರಗತಿ ಮಕ್ಕಳಿಗೆ 1 ತಿಂಗಳು ಸೇತುಬಂಧ. 4-10ನೇ ತರಗತಿ ಮಕ್ಕಳಿಗೆ 15 ದಿನ ಕಾರ‍್ಯಕ್ರಮ ಬೆಂಗಳೂರು (ಮೇ.30):ರಾಜ್ಯದಲ್ಲಿ ಮೇ 31ರಿಂದ ಶಾಲೆಗಳಲ್ಲಿ ತರಗತಿ ಚಟುವಟಿಕೆಗಳು ಶುರುವಾಗಲಿದ್ದು, ಈ ಅವಧಿಯಲ್ಲಿ 1ರಿಂದ 3ನೇ ತರಗತಿಗೆ ಆರಂಭದ 30 ದಿನಗಳು ಹಾಗೂ 4ರಿಂದ 10ನೇ ತರಗತಿ ಮಕ್ಕಳಿಗೆ 15 ದಿನಗಳ ಕಾಲ ‘ಸೇತುಬಂಧ’ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚಿಸಿದೆ. ಮಕ್ಕಳಲ್ಲಿನ ಕಲಿಕಾ ಅಂತರ ತಗ್ಗಿಸಲು ಸೇತುಬಂಧವನ್ನು ಸರ್ಕಾರ ಹಮ್ಮಿಕೊಳ್ಳುತ್ತದೆ. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಶಿಕ್ಷಣದ ಸಾಹಿತ್ಯ ಮತ್ತು ವಿನ್ಯಾಸವನ್ನು ಸಿದ್ಧಪಡಿಸಿ://.../-2/+/knದಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಶಾಲಾ ಹಂತದಲ್ಲಿ ಸೇತುಬಂಧ ಶಿಕ್ಷಣವನ್ನು ( ) ಅನುಷ್ಠಾನಗೊಳಿಸಲು ಸಹಕಾರಿಯಾಗುವಂತೆ ಹಾಗೂ ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗಾಗಿ ಈ ಸಾಹಿತ್ಯವನ್ನು ಸಿದ್ಧಪಡಿಸಿದೆ. ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟಹಾಗೂ ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಂಬಂಧ ಕಲ್ಪಿಸುವುದು ಸೇತುಬಂಧ ಶಿಕ್ಷಣದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ 1ರಿಂದ 10 ತರಗತಿಗೆ ಸೇತುಬಂಧ ಆಯೋಜಿಸಲಾಗಿದೆ. ಮಕ್ಕಳ ಕಲಿಕಾ ಅನುಭವಗಳನ್ನು ಆಧರಿಸಿ ರಸಪ್ರಶ್ನೆ ಲಿಖಿತ ಅಥವಾ ಮೌಖಿಕ ಪ್ರಶ್ನೋತ್ತರ, ಸರಳ ಯೋಜನೆಗಳು, ಸಂಭಾಷಣೆ, ಸರಳ ಚಟುವಟಿಕೆಗಳು, ಅಭ್ಯಾಸ ಹಾಳೆಗಳನ್ನು ಪೂರ್ಣಗೊಳಿಸಿರುವುದು, ಮನೆಪಾಠ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮೌಲ್ಯಮಾಪನ ಮಾಡುವುದು. ಸೇತುಬಂಧದ ಬಳಿಕವೂ ವಿದ್ಯಾರ್ಥಿಗಳಲ್ಲಿ ಸಾಮರ್ಥ್ಯ ಗಳಿಕೆ ಆಗಿರದಿದ್ದಲ್ಲಿ ಅಂತಹವರನ್ನು ಗಮನಿಸಿ ಆಯಾ ತರಗತಿ ಪಠ್ಯ ಬೋಧನಾ ಸಂದರ್ಭದಲ್ಲಿ ಪೂರ್ವ ಸಿದ್ಧತಾ ಚಟುವಟಿಕೆಗಳನ್ನು ನೀಡುವಾಗ ಸಾಮರ್ಥ್ಯಗಳಿಗೆ ವಿಶೇಷ ಆದ್ಯತೆ ನೀಡಿ ಕಲಿಕೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದೆ. ಸೇತುಬಂಧ ಶಿಕ್ಷಣದ ಅನುಷ್ಠಾನ ಕಾರ್ಯತಂತ್ರಗಳು: ವಿವಾದಕ್ಕೆ ಕಾರಣವಾಯ್ತು ಕುವೆಂಪು ವಿಶ್ವವಿದ್ಯಾನಿಲಯದಿಂದ ಹೊರಬಿದ್ದ ಎಂದೂ ಮೇಲ್ವಿಚಾರಣೆ ಮತ್ತು ಉಸ್ತುವಾರಿ: ಮಕ್ಕಳ ಮನಸ್ಸನ್ನು ಕಲುಷಿತಗೊಳಿಸುವ ಪಠ್ಯಪುಸ್ತಕಕ್ಕೆ ಅವಕಾಶವಿಲ್ಲ: ಸಿಎಂ