ಭಗತ್ ಸಿಂಗ್ ಪಾಠ ಕೈಬಿಟ್ಟಿರುವುದು ನಾಚಿಕೆಗೇಡು ಕಿಡಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್ ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ರಾಷ್ಟ್ರಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಕೇಜ್ರಿವಾಲ್ ಸೇರಿದಂತೆ ಹಲವು ಮಂದಿ ಕಿಡಿಕಾರಿದ್ದಾರೆ. ಬೆಂಗಳೂರು (ಮೇ.18):ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್ ( ) ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ರಾಷ್ಟ್ರಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್ ( ), ಭಗತ್ ಸಿಂಗ್ ಅವರನ್ನು ಬಿಜೆಪಿಯು ಇಷ್ಟೊಂದು ದ್ವೇಷಿಸುವುದಕ್ಕೆ ಕಾರಣವೇನು? ಪಠ್ಯಪುಸ್ತಕದಿಂದ ( ) ಅವರ ಪಠ್ಯವನ್ನು ತೆಗೆಯುವ ನಿರ್ಧಾರವು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನವಾಗಿದೆ. ದೇಶವು ಇದನ್ನು ಸಹಿಸುವುದಿಲ್ಲ. ಬಿಜೆಪಿ () ಸರಕಾರವು ತನ್ನ ನಿರ್ಧಾರವನ್ನು ಹಿಂಪಡೆಯಲೇಬೇಕು ಎಂದು ಆಗ್ರಹಿಸಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕರ್ನಾಟಕ ಸರಕಾರದ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಭಗತ್ ಸಿಂಗ್ ವಿರುದ್ಧದ ಬಿಜೆಪಿಯ ದ್ವೇಷ ಹೆಚ್ಚಾಗುತ್ತಿದೆ. ಕಡಿಮೆ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ವಿಚಾರಗಳು ಯುವಕರಲ್ಲಿ ದೇಶಭಕ್ತಿ ಹೆಚ್ಚಿಸುತ್ತದೆ. ಜನರಲ್ಲಿ ದೇಶಭಕ್ತಿ ಜಾಗೃತಗೊಳ್ಳುವುದರಿಂದ ಭಯಗೊಂಡು ಬಿಜೆಪಿ ಈ ರೀತಿ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. 2022 ಮೇ 21 ರಂದು ಉದ್ಯೋಗ ಮೇಳ, ಆಸಕ್ತರು ಅರ್ಜಿ ಸಲ್ಲಿಸಿ ಕರ್ನಾಟಕ ಬಿಜೆಪಿ ಸರಕಾರವು ಶಾಲಾ ಪುಸ್ತಕಗಳಿಂದ ಭಗತ್ ಸಿಂಗ್ ಅವರ ಅಧ್ಯಾಯವನ್ನು ತೆಗೆದು ಹಾಕಿರುವುದು ನಾಚಿಕೆಗೇಡು. ಬಿಜೆಪಿಯು ಭಗತ್ ಸಿಂಗ್ ( ) ರನ್ನು ದ್ವೇಷಿಸುತ್ತಿರುವುದು ಏಕೆ? ಬಿಜೆಪಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಇಂತಹ ಅವಮಾನವನ್ನು ಭಾರತ ಸಹಿಸಿಕೊಳ್ಳುವುದಿಲ್ಲ. ಎಂದು ಎಎಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಈ ನಡುವೆ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪರಿಷ್ಕೃತ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ. 2 ಜೂನ್ ಅಂತ್ಯದೊಳಗೆ ಎರಡನೇ ಅವಧಿಯ ಫಲಿತಾಂಶ ಪ್ರಕಟ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅಥವಾ ಆರ್‌ಎಸ್‌ಎಸ್ ಬಗ್ಗೆ ಏನೂ ಇಲ್ಲ, ಆದರೆ ಜನರಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿಯಾಗಬೇಕಾದ ಅವರ ಭಾಷಣ ಮಾತ್ರ ಇದೆ, ಈ ಬಗ್ಗೆ ಆಕ್ಷೇಪಣೆ ಎತ್ತಿರುವವರು ಪಠ್ಯಪುಸ್ತಕವನ್ನು ಪರಿಶೀಲಿಸಿಲ್ಲ ಎಂದು ಹೇಳಿದ್ದಾರೆ.