2022 ಮೇ.19 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಸಾಧ್ಯತೆ ಮೇ 15ರ ವೇಳೆಗೆ ನಿರೀಕ್ಷಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು, ಮೇ 19ರ ಹೊತ್ತಿಗೆ ನೀಡಲು ಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು (ಮೇ.12):ಮೇ 15ರ ವೇಳೆಗೆ ನಿರೀಕ್ಷಿಸಿದ್ದ ಎಸ್ಸೆಸ್ಸೆಲ್ಸಿ () ಫಲಿತಾಂಶ ಮೌಲ್ಯಮಾಪನದಲ್ಲಿ ಸಣ್ಣಪುಟ್ಟದೋಷ ಸರಿಪಡಿಸುವುದು ಸೇರಿದಂತೆ ವಿವಿಧ ಕಾರಣಗಳಿಂದ ಮೂರ್ನಾಲ್ಕು ದಿನ ತಡವಾಗಲಿದ್ದು, ಮೇ 19ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಪರಿಕ್ಷಾ ಫಲಿತಾಂಶವನ್ನು, ದಿನಾಂಕ ಸಮಯ ಎಲ್ಲಾ ಮಾಹಿತಿಯನ್ನು ( ) ://.../ ಅಥವಾ ://../ ಗೆ ಭೇಟಿ ನೀಡಿ ಚೆಕ್‌ ಮಾಡಬಹುದು. ಮೌಲ್ಯಮಾಪನ ಕಾರ್ಯ ನಿರೀಕ್ಷೆಗಿಂತ ತಡವಾಗಿ ಪೂರ್ಣಗೊಂಡಿದೆ. ಬಳಿಕ ಮೌಲ್ಯಮಾಪನದಲ್ಲಿ ಸಣ್ಣ ಪುಟ್ಟ ದೋಷಗಳು, ಕಣ್ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಇದಾದ ನಂತರ ಅಂಕಗಳ ದಾಖಲೀಕರಣ ಸೇರಿದಂತೆ ಫಲಿತಾಂಶ () ಪ್ರಕಟಿಸಲು ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಇನ್ನೂ ಒಂದು ವಾರ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ಮೇ 19ರ ಹೊತ್ತಿಗೆ ಫಲಿತಾಂಶ ನೀಡಲು ಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫಲಿತಾಂಶ ಪ್ರಕಟಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ( ) ಅವರೊಂದಿಗೆ ಚರ್ಚಿಸಿ ದಿನಾಂಕ ಪ್ರಕಟಿಸಲು ಮಂಡಳಿ ಅಧಿಕಾರಿಗಳು ತೀರ್ಮಾನ ಕೈಗೊಂಡಿದ್ದಾರೆ. ಕಳೆದ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದ () ಒಟ್ಟು 15,387 ಶಾಲೆಗಳ 8.73ಲಕ್ಷ ವಿದ್ಯಾರ್ಥಿಗಳು () ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 3,446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 234 ಕೇಂದ್ರಗಳಲ್ಲಿ ನಡೆದ ಮೌಲ್ಯಪಾಪನ ಪ್ರಕ್ರಿಯೆಯಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದಾರೆ. ಎಸ್ಸೆಸ್ಸೆಲ್ಸಿ ಪೇಲ್‌ ಕಡಿಮೆ ಮಾಡಲು 10% ಕೃಪಾಂಕ ಎಸ್ಸೆಸ್ಸೆಲ್ಸಿ ಪೇಲ್‌ ಕಡಿಮೆ ಮಾಡಲು 10% ಗ್ರೇಸ್ ಮಾರ್ಕ್:ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ( ) ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಅಂಕ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ. ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ. ಉದಾಹರಣೆಗೆ- ಪರೀಕ್ಷೆ () ಬರೆದಿರುವ ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದು, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್‌ ಅಂಕಗಳಾಗಿ ದೊರೆಯುತ್ತವೆ. ಕನ್ನಡ () ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ. ಬೇಸಿಗೆ ಕಾರಣ ಶಾಲಾ ಸಮವಸ್ತ್ರ ಕಡ್ಡಾಯ ಬೇಡ, ರಾಜ್ಯಗಳಿಗೆ ಕೇಂದ್ರ ಸೂಚನೆ! ಹಾಗಾಗಿ ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಗ್ರೇಸ್‌ ಅಂಕಗಳನ್ನು ( ) ಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ. 2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕದಿಂದಾಗಿ ಶೇ.9ರಷ್ಟು ವಿದ್ಯಾರ್ಥಿಗಳು () ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು.