ಎನ್ ಡಿಎ ನಾಯಕರಾಗಿ ಮೋದಿ ಅವಿರೋಧ ಆಯ್ಕೆ: ಜೂ. 8ರಂದು ಪ್ರಮಾಣ ವಚನ
ನವದೆಹಲಿ:ಪ್ರಧಾನಿ ನರೇಂದ್ರಯವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಎನ್ ಡಿಎ
21 ಪಕ್ಷಗಳ ಸಭೆಯಲ್ಲಿ ಮೋದಿ ಆಯ್ಕೆ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ.
ಜೂ. 8ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಮೋದಿಯವರು ಜವಾಹರಲಾಲ್ ನೆಹರು ಅವರ ಹ್ಯಾಟ್ರಿಕ್ ಸಾಧನೆಯನ್ನು ಸರಿಗಟ್ಟಲಿದ್ದಾರೆ.
/ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಮೈತ್ರಿಕೂಟ ಸರ್ಕಾರ ಬಡವರು, ಮಹಿಳೆಯರು, ರೈತರು, ಯವಕರು ಸೇವೆ ಆದ್ಯತೆ ನೀಡಲು ತೀರ್ಮಾನಿಸಿದೆ.
ಈ ಬಾರಿಯ ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ ಡಿಎ ಒಗ್ಗಟ್ಡಾಗಿ ಹೋರಾಡಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹೀಗಾಗಿ ನರೇಂದ್ರ ಮೋದಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಟಿಡಪಿ ನಾಯಕ ಎನ್.ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.