ಕಾಂಗ್ರೆಸ್ ಜತೆ ಕೈ ಜೋಡಿಸಲ್ಲ
ನವದೆಹಲಿ, ಜೂ.೬- ಪ್ರಧಾನಿ ಹುದ್ದೆ ನೀಡಿದರೂ ಕಾಂಗ್ರೆಸ್ ಪಕ್ಷದೊಂದಿಗೆ ಅವರೊಂದಿಗೆ ಕೈಜೋಡಿಸುವುದಿಲ್ಲ ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.
ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ದೇಶದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ.
ಈ ಹಿನ್ನೆಲೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಜನಸೇನಾ ಪಕ್ಷ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಬೆಂಬಲ ನೀಡಲಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನನಗೆ ಪ್ರಧಾನಿ ಹುದ್ದೆ ನೀಡಿದರೂ ತಾವು ಅದನ್ನು ಸ್ವೀಕಾರ ಮಾಡುವುದಿಲ್ಲ, ನಮ್ಮ ಬೆಂಬಲ ಏನಿದ್ದರೂ ಬಿಜೆಪಿ ಮತ್ತು ನರೇಂದ್ರ ಮೋದಿ ಅವರಿಗೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನರೇಂದ್ರ ಮೋದಿ ಅವರಿಗೆ ಜನಸೇನಾ ಪಕ್ಷ ಬೇಷರತ್ ಬೆಂಬಲ ನೀಡಲಿದೆ. ಇದರಲ್ಲಿ ಎರಡು ಮಾತಿಲ್ಲ. ಈ ಬೆಂಬಲ ರಾಜ್ಯದ ಅಭಿವೃದ್ಧಿಗೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ೧೭೫ ವಿಧಾನಸಭೆ ಮತ್ತು ಲೋಕಸಭೆಯ ೨೫ ಸ್ಥಾನಗಳಿಗೆ ನಡೆದ ಚುಣಾವಣೆಯಲ್ಲಿ ಜನಸೇನಾ ಪಕ್ಷ ಟಿಡಿಪಿ ಮತ್ತು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು.
ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ತಾನು ಸ್ಪರ್ದೇ ಮಾಡಿದ್ದ ೨೧ ವಿಧಾನಸಭಾ ಮತ್ತು ೨ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ವಿಜಯದ ನಗೆ ಬೀರಿದೆ.