ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು,ಜೂ.೬-ಕೆಲವೊಂದು ಜಿಲ್ಲೆಗಳಲ್ಲಿ ಮುಂದಿನ ೭ ದಿನಗಳ ಕಾಲ ೪೦-೫೦ ಕಿಮೀ ವೇಗದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ ೪೮ ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ೨-೩ ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ಹೆಚ್ಚಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ೫ ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ೧೭ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಉಳಿದ ಭಾಗಗಳು, ಕರ್ನಾಟಕದ ಉಳಿದ ಭಾಗಗಳು, ದಕ್ಷಿಣ ಮಹಾರಾಷ್ಟ್ರದ ಕೆಲವು ಭಾಗಗಳು, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳು, ದಕ್ಷಿಣ ಛತ್ತೀಸ್ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳು ಮತ್ತು ಇತರ ಕೆಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆಯಲು ಅನುಕೂಲಕರವಾಗಿದೆ. ಮುಂದಿನ ೩-೪ ದಿನಗಳಲ್ಲಿ ಪಶ್ಚಿಮ ಮಧ್ಯ ಮತ್ತು ವಾಯುವ್ಯ ಬಂಗಾಳ ಕೊಲ್ಲಿ. ಚಂಡಮಾರುತದ ಪರಿಚಲನೆಯು ಕರಾವಳಿಯಲ್ಲಿ ಮತ್ತು ಸುತ್ತಮುತ್ತಲಿನ ಸಮುದ್ರ ಮಟ್ಟದಿಂದ ೪.೫ ಕಿಮೀ ಮತ್ತು ೫.೮ ಕಿಮೀ ನಡುವೆ ಇರುತ್ತದೆ.
ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗಿದೆ. ಬೆಳಗಾವಿ, ವಿಜಯಪುರ, ರಾಯಚೂರು, ಕಲಬುರ್ಗಿ, ಗದಗ ಜಿಲ್ಲೆಗಳ ಕೆಲವೆಡೆ ಗಂಟೆಗೆ ೪೦-೫೦ ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ.
ಇಂದು ಬೆಳಗಾವಿ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆ-ಗುಡುಗು ಸಹಿತ (ಗಾಳಿಯ ವೇಗ ಗಂಟೆಗೆ ೪೦-೫೦ ಕಿಮೀ) ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆ-ಗುಡುಗು ಸಹಿತ (ಗಾಳಿಯ ವೇಗ ಗಂಟೆಗೆ ೩೦-೪೦ ಕಿ.ಮೀ) ಸಾಧ್ಯತೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಿ.೧೦ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.