ಮುಖ್ಯಮಂತ್ರಿ ಸ್ಥಾನಕ್ಕೆ ಜಗನ್ ರಾಜೀನಾಮೆ
ಅಮರಾವತಿ, ಜೂ.4- ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ಪಿ ಪಕ್ಷವು ಹೀನಾಯವಾಗಿ ಸೋತಿರುವ ಬೆನ್ನಲ್ಲೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಜಗನ್ ಮೋಹನ್ ರೆಡ್ಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮಂಗಳವಾರ ಸಂಜೆ ರಾಜ್ಯಪಾಲ ಅಬ್ದುಲ್ ನಜೀರ್ ಅವರಿಗೆ ಜಗನ್ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಆಂಧ್ರ ಪ್ರದೇಶದ ಒಟ್ಟು 175 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ವೈಎಸ್ಆರ್ಪಿ ಕೇವಲ 10 ಸ್ಥಾನಗಳಲ್ಲಿ ಜಯಗಳಿಸಿದೆ. ಚಂದ್ರಬಾಬು ನಾಯ್ಡು ನೇತೃತ್ಫ್ವದ ಟಿಡಿಪಿ ಮೈತ್ರಿಕೂಟ 164 ಸ್ಥಾನಗಳಲ್ಲಿ ಜಯಗಳಿಸಿದೆ. ಇನ್ನೂ, ಚಂದ್ರಬಾಬು ನಾಯ್ಡು ಅವರು ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.