ರಾಹುಲ್ ಪ್ರಧಾನಿ ಅಭ್ಯರ್ಥಿ: ಖರ್ಗೆ
ನವದೆಹಲಿ,ಜೂ.೧- ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ತಮ್ಮ ಒಲವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾg.
ಇಂಡಿಯಾ ಮೈತ್ರಿಕೂಟದ ಇತರೆ ಪಕ್ಷಗಳಿಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಮುಂದಾಗಿರುವ ನಡುವೆಯೂ ಖರ್ಗೆ ಅವರ ಈ ಹೇಳಿಕೆ ಕುತೂಹಲ ಕೆರಳಿಸಿದೆ.
ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ನಾವ್ಯಾಕೆ ಇತರಿಗೆ ಅನಗತ್ಯವಾಗಿ ಗೊಂದಲ ಮೂಡಿಸಬೇಕು. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ನನ್ನ ಆಯ್ಕೆ ರಾಹುಲ್ ಗಾಂಧಿ ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ೨೦೦೪ ಮತ್ತು ೨೦೦೯ರಲ್ಲಿ ಮಾಡಿದಂತೆ ಮಿತ್ರಪಕ್ಷಗಳು ಒಟ್ಟಾಗಿ ಕುಳಿತು ಪ್ರಧಾನಿ ಅಭ್ಯರ್ಥಿಯನ್ನು ಪ್ರಕಟಿಸಿದ್ದೆವು. ಈ ಬಾರಿಯೂ ಅದೇ ರೀತಿ ಮಾಡುತ್ತೇವೆ. ವೈಯಕ್ತಿಕವಾಗಿ ನನ್ನನ್ನು ಕೇಳಿದರೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಸೂಚಿಸುವೆ ಎಂದಿದ್ದಾರೆ.
“ಕಾಂಗ್ರೆಸ್‌ನಲ್ಲಿ, ನಮ್ಮ ನಾಯಕ ರಾಹುಲ್ ಗಾಂಧಿ. ಹೀಗಾಗಿ ಅವರ ಹೆಸರೇ ಮುಂಚೂಣಿಗೆ ಬರಲಿದೆ ಅನಗತ್ಯವಾಗಿ ನನ್ನ ಹೆಸರನ್ನು ಏಕೆ ತರಬೇಕು. ನನ್ನ ಪಕ್ಷ ನನ್ನ ಭವಿಷ್ಯವನ್ನು ನಿರ್ಧರಿಸುತ್ತದೆ” ಎಂದು ತಿಳಿಸಿದ್ದಾರೆ.
ನಮ್ಮ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಬಯಸಲು ನಾಯಕರ ಪೈಕಿ ನಾನು ಒಬ್ಬ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ತಾವು ಆಗಿರಬಹುದು ಆದರೆ ವಯಕ್ತಿಕವಾಗಿ ರಾಹುಲ್ ಗಾಂಧಿ ಪ್ರಧಾನಿಯಾಬೇಕು ಎನ್ನುವ ಆಸೆ ಇಟ್ಟುಕೊಂಡ ವ್ಯಕ್ತಿ ನಾನು ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಕ್ರಮವಾಗಿ ಅಮೇಠಿ ಮತ್ತು ರಾಯ್‌ಬರೆಲ್‌ನಿಂದ ಸ್ಪರ್ಧಿಸುವಂತೆ ಮನವಿ ಮಾಡಲಾಗಿತ್ತು. ರಾಹುಲ್ ಗಾಂಧಿ ಅವರು ದೇಶಾದ್ಯಂತ ಪ್ರಚಾರ ಮಾಡಬೇಕು ಮತ್ತು ಅವರ ಪ್ರಚಾರವನ್ನು ನೋಡಿಕೊಳ್ಳಲು ಯಾರೂ ಇರುವುದಿಲ್ಲ ಎನ್ನುವ ಆತಂಕದಿಂದ ಪ್ರಿಯಾಂಕ ಗಾಂಧಿ ಹಿಂದೆ ಸರಿದ್ದಾರೆ ಎಂದು ತಿಳಿಸಿದ್ದಾರೆ.
“ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮತ್ತು ಮಣಿಪುರದಿಂದ ಮುಂಬಲ್ ವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಹೊಸ ಉತ್ಸಾಹ ನೀಡಿತು ಎಂದಿದ್ದಾರೆ.