ಜಯ್ ಶಾ, ಗೌತಮ್ ಗಂಭೀರ ಚರ್ಚೆ
ಮುಂಬೈ: 17ನೇ ಆವೃತ್ತಿಯ ಐಪಿಎಲ್‍ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೆಕೆಆರ್ ಯಶಸ್ಸಿನ ಹಿಂದೆ ತಂಡದ ಮೆಂಟರ್ ಗೌತಮ್ ಗಂಭೀರ್ ಇದ್ದಾರೆ.
ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಇದು ಚರ್ಚೆಯ ವಿಷಯವಾಗಿದೆ.
ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.
ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ.
ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.
ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.
ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.
ಧೋನಿ ಟೀಮ್ ಇಂಡಿಯಾ ಕೋಚ್ ಆಗಲಿ
ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂ.ಎಸ್.ಧೋನಿ ಮುಂದಿನ ಮುಖ್ಯ ಕೋಚ್ ಆಗಲಿ ಎಂದು ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್‍ಕುಮಾರ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
ಡ್ರೆಸ್ಸಿಂಗ್ ರೂಮ್‍ನಲ್ಲಿ ಧೋನಿಗೆ ಹೆಚ್ಚು ಗೌರವ ಇದೆ. ದೀರ್ಘ ಕಾಲದವರೆಗೆ ಕ್ರಿಕೆಟ್ ಆಡಿದ ಅನುಭವ ಹೊಂದಿದ್ದಾರೆ. ತಂಡವನ್ನು ನಿಭಾಯಿಸುವವರು ಬೇಕಾಗಿದ್ದಾರೆ.
ಧೋನಿ ನಾಯಕನಾಗಿದ್ದಾಗ ತಂಡದಲ್ಲಿ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಗೌತಮ್ ಗಂಭಿರ್ ಮತ್ತು ಯುವರಾಜ್ ಸಿಂಗ್ ಇದ್ದರು. ಇವರನ್ನೆಲ್ಲಾ ಧೋನಿ ಸರಿಯಾಗಿ ನಿಭಾಯಿಸಿದ್ದರು ಎಂದು ರಾಜ್‍ಕುಮಾರ್ ಶರ್ಮಾ ನೆನೆದಿದ್ದಾರೆ.
ಕೋಚ್ ಆಗಿ ಗಂಭೀರ್ ಆಯ್ಕೆ ಸಾಧ್ಯತೆ ಹೆಚ್ಚು
ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಗಡವು ಸೋಮವಾರ ಮುಕ್ತಾಯವಾಗಿದೆ. ಎಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ನಿರಾಸಕ್ತಿ ಹೊಂದಿದ್ದಾರೆ. ವಿದೇಶಿ ಕೋಚ್‍ಗಳ ಬಗ್ಗೆ ಬಿಸಿಸಿಐ ಆಸಕ್ತಿ ಹೊಂದಿಲ್ಲಘಿ. ಪ್ರತಿ ಬಾರಿಯೂ ಬಿಸಿಸಿಐ ಅಭ್ಯರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದವರನ್ನು ಪಟ್ಟಿಯನ್ನು ಪ್ರಕಟಿಸಲಿದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಲಿದೆ. ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ ಸಂದರ್ಶನ ಮಾಡಿ ಕೊನೆಯಲ್ಲಿ ಹೆಸರನ್ನು ಶಿಫಾರಸ್ಸು ಮಾಡುತ್ತದೆ. ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.